ಬೆಂಗಳೂರು:ನವರಾತ್ರಿ ಪ್ರಯುಕ್ತ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಅ.19ರ ಗುರುವಾರ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿದೆ.
ನಾಡಿನಲ್ಲಿ ಮಳೆ ಬೆಳೆ ಸಮೃದ್ಧವಾಗಿ ಆಗಲಿ ಎಂದು ಪ್ರಾರ್ಥಿಸಿ ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ಕುಂಕುಮಾರ್ಚನೆ ನೆರವೇರಿಸಲು ಸೂಚಿಸಲಾಗಿದೆ. ಪ್ರತಿ ವರ್ಷ ಆಶ್ವಯುಜ ಮಾಸದ ಮೊದಲ ದಿನದಿಂದ ನವಮಿಯವರೆಗೆ ಶಕ್ತಿ ದೇವತೆಗಳ ಆರಾಧನೆ ಮಾಡಲಾಗುತ್ತದೆ. ಅದರಂತೆ ಲಲಿತಾ ಪಂಚಮಿ ದಿನವಾದ ಗುರುವಾರ ವಿಶೇಷ ದಿನವಾಗಿದೆ. ಈ ವಿಶೇಷ ದಿನದಂದು ರಾಜ್ಯದಲ್ಲಿ ಉತ್ತಮ ಮಳೆಯಾಗಿ ಸಮೃದ್ಧವಾದ ಬೆಳೆ ಆಗಲಿ ಹಾಗೂ ಸಸ್ಯರಾಶಿಗಳು ಹಾಗೂ ಸಕಲ ಜೀವರಾಶಿಗೂ ಒಳಿತಾಗಲೆಂದು ಸಂಕಲ್ಪ ಮಾಡುವ ಮೂಲಕ ಕುಂಕುಮಾರ್ಚನೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.
ಅಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದಿದ್ದಲ್ಲಿ ಅ.22ರ ಭಾನುವಾರ ದುರ್ಗಾಷ್ಠಮಿ ದಿನದಂದು ನಡೆಸಬೇಕು. ಈ ಕುರಿತು ಭಕ್ತರ ಮಾಹಿತಿಗಾಗಿ ದೇವಸ್ಥಾನಗಳ ಸೂಚನಾ ಲಕಗಳಲ್ಲಿ ಮಾಹಿತಿ ಒದಗಿಸುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
