ಬೆಂಗಳೂರು:ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಕೈಗೊಳ್ಳಬೇಕಾಗಿರುವ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನೆ ಹಾಗೂ ನಿವೃತ್ತ ಕಾರ್ಯದರ್ಶಿ ತಿಪ್ಪೇಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು.ಕುಂಚಿಟಿಗ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ರಾಜ್ಯ ಸಚಿವ ಸಂಪುಟ ಸಭೆ ಈಗಾಗಲೇ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದ ಮಾಹಿತಿಯನ್ನು ರವಾನಿಸಬೇಕು. ಆದಷ್ಟು ಬೇಗ ಕೇಂದ್ರ ಸರ್ಕಾರ ಈ ವಿಷಯವನ್ನು ಸಚಿವ ಸಂಪುಟ ಸಭೆಯ ಮುಂದೆ ತಂದು ಕುಂಚಿಟಿಗ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಜಯಚಂದ್ರ ಸೂಚಿಸಿದರು.
ತಾವು ಸಹ ದೆಹಲಿಗೆ ತೆರಳಿ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಈ ವಿಷಯವನ್ನು ಸಂಪುಟ ಸಭೆಯ ಮುಂದೆ ತರಲು ಒತ್ತಡ ಹೇರುವುದಾಗಿ ಜಯಚಂದ್ರ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
