ತುಮಕೂರು:ಕುಣಿಗಲ್​ ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ ಬಣ ರಾಜಕೀಯ ಗೋಚರಿಸಿದೆ. ಪ್ಲೆಕ್ಸ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಹಾಗೂ ರಾಜೇಶ್ ಗೌಡ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ.
ಕುಣಿಗಲ್ ಪಟ್ಟಣದಲ್ಲಿ ನಾಳೆ(ಡಿ.7) ಜನಸಂಕಲ್ಪ ಯಾತ್ರೆ ನಡೆಯಲಿದ್ದು, ಮುನ್ನಾ ದಿನವಾದ ಇಂದು(ಮಂಗಳವಾರ) ಕೊತ್ತಗೆರೆಯಲ್ಲಿ ಪ್ಲೆಕ್ಸ್​ ರಾಜೇಶ್​ಗೌಡರ ಬೆಂಬಲಿಗರು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯಡಿಯೂರಪ್ಪ ಸೇರಿದಂತೆ ಕುಣಿಗಲ್​ಗೆ ಆಗಮಿಸುವ ಬಿಜೆಪಿ ನಾಯಕರಿಗೆ ಸ್ವಾಗತ ಕೋರುವ ಪ್ಲೆಕ್ಸ್​ಗಳನ್ನು ಕಟ್ಟುತ್ತಿದ್ದರು. ಈ ವೇಳೆ ಕೃಷ್ಣಕುಮಾರ್​ರ ಬೆಂಬಲಿಗರು ಅಡ್ಡಿ ಪಡಿಸಿದ್ದು, ಎರಡೂ ಬಣದ ನಡುವೆ ಮಾತಿನ ಚಕಮಕಿ ನಡೆದು ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ಡಿ.ಕೃಷ್ಣಕುಮಾರ್ ಹಾಗೂ ರಾಜೇಶ್ ಗೌಡ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡುತ್ತಿದ್ದ ಪರಿಣಾಮ ಕುಣಿಗಲ್​ ಮತ್ತು ತುಮಕೂರು ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿತ್ತು. ಮೈಲಿ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಬಂದ ಪೊಲೀಸರು ಗುಂಪನ್ನು ಚದುರಿಸಿದರು.
ಇತ್ತೀಚಿಗೆ ಮಾಜಿ ಸಂಸದ ಎಸ್​.ಪಿ.ಮುದ್ದಹನುಮೇಗೌಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಮುಂಭರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್​ ಯಾರಿಗೆ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮುದ್ದಹನುಮೇಗೌಡ, ಡಿ.ಕೃಷ್ಣಕುಮಾರ್​ ಮತ್ತು ರಾಜೇಶ್​ಗೌಡ ಮೂವರೂ ಟಿಕೆಟ್​ ಆಕಾಂಕ್ಷಿಗಳು.
ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಲೇಡಿ ಪಿಎಸ್​ಐ ಕಿರುಕುಳ ಕೊಡುತ್ತಿದ್ದಾರೆ… ಡೆತ್​ನೋಟ್​ ಬರೆದಿಟ್ಟು ನಾಪತ್ತೆಯಾಗಿದ್ದ ಸಿರಿವಾರದ ಯುವಕ 3 ದಿನದ ಬಳಿಕ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
