ತುಮಕೂರು:ಮಂಡಿ ನೋವಿನಿಂದ ಬಳಲುತ್ತಿದ್ದ ಕ್ರೀಡಾಪಟುವಿಗೆ ಉಚಿತವಾಗಿ ತಾವೇ ಖುದ್ದಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಕುಣಿಗಲ್​ ಕಾಂಗ್ರೆಸ್​ ಶಾಸಕ ಡಾ. ರಂಗನಾಥ್​ ಅವರು ಮತ್ತೊಮ್ಮೆ ಮಾನವೀಯತೆಯನ್ನು ಮೆರೆದಿದ್ದಾರೆ.
ಕುಣಿಗಲ್ ನಿವಾಸಿ ಭಷ್ಯಾ, ರಗ್ಬಿ ಆಟಗಾರ್ತಿಯಾಗಿದ್ದು, ಆಕೆಗೆ ಮಂಡಿ ನೋವಿನ ಚಿಕಿತ್ಸೆಯ ಅಗತ್ಯವಿತ್ತು. ಬಡತನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಹಣ ಒದಗಿಸಲು ಕುಟುಂಬ ಸಂಕಷ್ಟ ಎದುರಿಸುತ್ತಿತ್ತು. ಶಾಸಕರ ಗಮನಕ್ಕೆ ಬಂದ ಕೂಡಲೇ ಮಂಡಿ ನೋವಿನಿಂದ ಬಳಲುತ್ತಿದ್ದ ಭವ್ಯಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಸ್ವತಃ ಶಾಸಕ ಡಾ ರಂಗನಾಥ್ ಉಚಿತವಾಗಿ ಶಸ್ತ್ರಚಿಕಿತ್ಸೆ‌ ಮಾಡಿದ್ದಾರೆ.
ರಂಗನಾಥ್ ತಂಡ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಭವ್ಯಾ ಕುಟುಂಬ ಶಾಸಕರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಮೂಲತಃ ವೈದ್ಯರಾದ ಡಾ.ರಂಗನಾಥ್​, ಶಾಸಕರಾದ ಬಳಿಕವೂ ಕ್ಷೇತ್ರದ ಹಲವರಿಗೆ ಚಿಕಿತ್ಸೆ ನೀಡುತ್ತಾ ಗಮನಸೆಳೆದಿದ್ದಾರೆ. ಕರೊನಾ ಸಂಕಷ್ಟ ಕಾಲದಲ್ಲೂ ಚಿಕಿತ್ಸೆ ನೀಡಿ ಡಾಕ್ಟರ್​ ರಂಗಣ್ಣ ಎಂದೇ ಜನರ ಮನದಲ್ಲಿ ಉಳಿದರು. ಈ ಹಿಂದೆ ತನ್ನ ಕ್ಷೇತ್ರದ ಮೂವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಕುಣಿಗಲ್​ ತಾಲೂಕು ಹುತ್ರಿದುರ್ಗ ಹೋಬಳಿಯ ಕಲ್ಲನಾಯಕನಹಳ್ಳಿಯ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ಅದರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿತ್ತು. ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅದೇ ರಸ್ತೆಯಲ್ಲೇ ಶಾಸಕರು ಹಿಂತಿರುಗುತ್ತಿದ್ದರು. ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡವರನ್ನು ಕಂಡ ಶಾಸಕರು, ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆತರಲು ತಕ್ಷಣ ವ್ಯವಸ್ಥೆ ಮಾಡಿದರು. ಅಲ್ಲದೆ, ಆಸ್ಪತ್ರೆಗೆ ತೆರಳಿ ತಾವೇ ಖುದ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದರು.
ಇದಲ್ಲದೆ, ಕುಣಿಗಲ್ ತಾಲೂಕಿನ ಯಡವಾಣಿ ಗ್ರಾಮದ ಶಿವನಂಜಯ್ಯ ಎಂಬವರು ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದರು. ಹೀಗಾಗಿ ತಮ್ಮ ಕ್ಷೇತ್ರದ ಶಾಸಕರಾಗಿರುವ ರಂಗನಾಥ್​ ಅವರ ಬಳಿ ಹಣ ಸಹಾಯ ಕೋರಿದ್ದರು. ಈ ವೇಳೆ ತಕ್ಷಣ ಸ್ಪಂದಿಸಿದ ರಂಗನಾಥ್​, ತಾವೇ ಖುದ್ದಾಗಿ ಆಪರೇಷನ್ ಮಾಡಲು ಮುಂದಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶಿವನಂಜಯ್ಯ ಅವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಾರೆ.
ಇದೇ ರೀತಿ ಶಾಸಕ ಡಾ. ರಂಗನಾಥ್ ಅನೇಕರಿಗೆ ನೆರವಾಗುತ್ತಿದ್ದು, ಅವರ ಕಾರ್ಯ ವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತೊಮ್ಮೆ ಬಡ ವ್ಯಕ್ತಿಗೆ ಉಚಿತ ಆಪರೇಷನ್​ ಮಾಡುವ ಮೂಲಕ ಜನ ಮನ ಗೆದ್ದ ಕುಣಿಗಲ್​ ಶಾಸಕ

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಕುಣಿಗಲ್​ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
