ತುಮಕೂರು:ಜೆಡಿಎಸ್​ನ ಭದ್ರಕೋಟೆಯಂತಿದ್ದ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಈಗಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ ಕಾಂಗ್ರೆಸ್​ ಸೇರಿದ್ದಾರೆ. ಇದೀಗ ಮಾಜಿ ಶಾಸಕ ಎಚ್.ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ.
ಜೆಡಿಎಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ನಿಂಗಪ್ಪ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಸಲ್ಲಿಸಿದ್ದಾರೆ.
2004ರಲ್ಲಿ ಕುಣಿಗಲ್​ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ನಿಂಗಪ್ಪ, 2008ರಲ್ಲಿ ತುಮಕೂರು ಗ್ರಾಮಾಂತರದ ಕ್ಷೇತ್ರದಿಂದ ಸ್ಪರ್ಧಿಸಿ ಸೋತ್ತಿದ್ದರು. 2013ರಲ್ಲಿ ಜೆಡಿಎಸ್​ನಿಂದ ಟಿಕೆಟ್ ಸಿಗದಿದ್ದಾಗ ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದ ಎಚ್.ನಿಂಗಪ್ಪ, ಮತ್ತೆ 2018ರಲ್ಲಿ ಜೆಡಿಎಸ್​ಗೆ ಮರಳಿದ್ದರು.
2018ರಲ್ಲಿ ನನ್ನನ್ನು ಜೆಡಿಎಸ್​ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ಎಂದು ನೇಮಿಸಿ ಎಚ್​ಡಿಕೆ ಆದೇಶ ಪತ್ರ ನೀಡಿದ್ದರು‌. ಅದು ಪತ್ರವಾಗಿಯೇ ಉಳಿಯಿತು. ಪಕ್ಷದ ಎಲ್ಲ ಚಟುವಟಿಕೆಗಳಿಂದ ನನ್ನನ್ನು ದೂರ ಇಟ್ಟಿದ್ದರು. ಇದೇ ಕಾರಣಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ನಿಂಗಪ್ಪ ಉಲ್ಲೇಖಿಸಿದ್ದಾರೆ.
ಈ ಕುರಿತು ‘ದಿಗ್ವಿಜಯ ನ್ಯೂಸ್’ಗೆ ಪ್ರತಿಕ್ರಿಯಿಸಿದ ನಿಂಗಪ್ಪ, 2023ರ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು.(ದಿಗ್ವಿಜಯ ನ್ಯೂಸ್​)
ಎಲ್ಲೆಲ್ಲೂ ಒಕ್ಕಲಿಗ ವಧು-ವರರ ಸಮಾವೇಶದ್ದೇ ಮಾತು! ಬಾಳಸಂಗಾತಿ ಹುಡುಕಾಟಕ್ಕೆ ಬಂದ 13 ಸಾವಿರ ಮಂದಿಗೆ ಭಾರೀ ನಿರಾಸೆ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಮಗನ ಮನೆಗೆ ಅಪ್ಪ-ಅಮ್ಮ ಬಂದದ್ದೇ ತಪ್ಪಾ? ಸೊಸೆಯ ಕಾಟ ಸಹಿಸದೆ ಸಾವಿನ ಮನೆಯ ಕದ ತಟ್ಟಿದ ಅತ್ತೆ, ಮಗನೂ ದುರಂತ ಅಂತ್ಯ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
