ಬೆಂಗಳೂರು:ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್​​​​​​​ನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿದ್ದು, ಗುರುವಾರ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಇದರ ಬೆನ್ನಲ್ಲೇ ಈ ಸುದ್ದಿ ಇದೀಗ ಅಧಿಕೃತಗೊಂಡಿದ್ದು, ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಪ್ರೇಮಿಗಳ ದಿನ.. ಪಬ್​ನಲ್ಲಿ ಬೀಯರ್​ ಬಾಟಲ್​ನಿಂದ ಗೆಳೆಯನ ತಲೆ ಒಡೆದ ಹೀರೋಯಿನ್​!? ಹೀಗೆ ಮಾಡಿದ್ದಾರೂ ಯಾಕೆ ಗೊತ್ತಾ?
ಈ ಕುರಿತು ಮಾತನಾಡಿದ್ದ ಕುಪೇಂದ್ರ ರೆಡ್ಡಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸುವಂತೆ ಸೂಚಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಅದರಂತೆಯೇ ಇದೀಗ ಎಚ್​ಡಿಕೆ ಹಾಗೂ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಕುರಿತು ಎಚ್​ಡಿಕೆ ಮಾಡಿದ ಟ್ವೀಟ್ ಹೀಗಿದೆ.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ (NDA) ಅಭ್ಯರ್ಥಿಯಾಗಿ ಮಾಜಿ ಸಂಸದರಾದ ಶ್ರೀ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು.@BJP4Karnatakaರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.ಅಶೋಕ್, ಮಾಜಿ ಸಚಿವರಾದ ಶ್ರೀ ಹೆಚ್.ಡಿ.ರೇವಣ್ಣ ಮುಂತಾದವರು…pic.twitter.com/kLoNDilk3K
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)February 15, 2024

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯ ಜೆಡಿಎಸ್- ಬಿಜೆಪಿ ಮೈತ್ರಿಕೂಟದ (NDA) ಅಭ್ಯರ್ಥಿಯಾಗಿ ಮಾಜಿ ಸಂಸದರಾದ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ ಮುಂತಾದವರು ಜತೆಯಲ್ಲಿದ್ದರು ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
