ಬೆಂಗಳೂರು:ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ತನ್ನ ತಂದೆ ಹನುಮಂತರಾಯಪ್ಪ ಅವರೊಂದಿಗೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್​ ಸೇರ್ಪಡೆಗೊಂಡರು. ಉಪಚುನಾವಣೆಯ ಕಾವು ಏರುತ್ತಿರುವ ಸಂದರ್ಭದಲ್ಲೇ ಕುಸುಮಾ ಮತ್ತು ಹನುಮಂತರಾಯಪ್ಪ ಕಾಂಗ್ರೆಸ್​ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಇತರೆ ಟಿಕೆಟ್ ಆಕಾಂಕ್ಷಿಗಳ ಕಣ್ಣು ಕೆಂಪಾಗುವಂತೆ ಮಾಡಿದ್ದಾರೆ.
ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರು ಎಂಬ ಕುತೂಹಲವನ್ನು ಹಾಗೆಯೇ ಉಳಿಸಿಕೊಂಡಿರುವ ಡಿ.ಕೆ.ಶಿವಕುಮಾರ್​ ಭಾನುವಾರ ಕುಸುಮಾ ತಲೆ ಮೇಲೆ ‘ಕೈ’ ಇಟ್ಟು ಆ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದರು. ಈ ಫೋಟೋ ಇದೀಗ ವೈರಲ್ ಆಗಿದ್ದು, ರಾಜಕೀಯ ಚಿಂತಕರ ಚಾವಡಿಯಲ್ಲಿ ಬಹುಚರ್ಚೆಗೆ ಗ್ರಾಸವಾಗಿದೆ.
ಇದನ್ನೂ ಓದಿ:ಆರ್​ಆರ್​ ನಗರ ಬೈ ಎಲೆಕ್ಷನ್​: ಕಾಂಗ್ರೆಸ್​ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್​ ಲಿಸ್ಟ್
ಅಭ್ಯರ್ಥಿ ಆಯ್ಕೆ ಪಟ್ಟಿಯನ್ನು ಫೈನಲ್​ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಎಐಸಿಸಿ ಶಿಫಾರಸ್ಸಿಗಾಗಿ ಭಾನುವಾರ ಸಂಜೆ ಕಳುಹಿಸಿದ್ದಾರೆ. ಅಂದಹಾಗೇ ಆ ಪಟ್ಟಿಯಲ್ಲಿ ಹೆಸರಿದೆ ಗೊತ್ತಾ? ಈಗಾಗಲೇ ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರೇ ಅಭ್ಯರ್ಥಿ ಎಂದು ಡಿಕೆಶಿ ಘೋಷಿಸಿದ್ದರು. ಅದರಂತೆ ಅಭ್ಯರ್ಥಿ ಆಯ್ಕೆ ಪಟ್ಟಿಯಲ್ಲಿ ಅವರ ಹೆಸರಿದೆ. ಇನ್ನು ಭಾರೀ ಕುತೂಹಲ ಮೂಡಿಸಿರುವ ಆರ್​ಆರ್​ ನಗರ ಕ್ಷೇತ್ರಕ್ಕೆ ಐಎಎಸ್​ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್​ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ.
ಪಕ್ಷ ಸೇರ್ಪಡೆ ಬೆನ್ನಲ್ಲೇ ವಿಶೇಷವಾಗಿ ಕುಸುಮಾಗೆ ಡಿಕೆಶಿ ಮಾಡಿದ ತಾಕೀತು ಏನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + twenty =
Remember me
