ಬೆಂಗಳೂರು:ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದರ ಬಗ್ಗೆ ವ್ಯಂಗ್ಯವಾಡಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಅವರಿಗೆ ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಫೇಸ್​ಬುಕ್​ ಮೂಲಕವೇ ತಿರುಗೇಟ್​ ನೀಡಿದ್ದಾರೆ.
ಕುಸುಮಾ ಅವರ ದುರಾದೃಷ್ಠ ಡಿ.ಕೆ. ರವಿ ಅವರಿಂದ ಡಿ.ಕೆ. ಶಿವಕುಮಾರ್​ ಅವರಿಗೆ ವರ್ಗಾವಣೆಗೊಳ್ಳುತ್ತಿದೆ. ಕುಸುಮಾ ಜಿಂದಾಬಾದ್​ ಎಂದು ಪ್ರಶಾಂತ್​ ಸಂಬರಗಿ ನಿನ್ನೆಯಷ್ಟೇ ತಮ್ಮ ಫೇಸ್​ಬುಕ್​ನಲ್ಲಿ ಕುಸುಮಾ ಕಾಂಗ್ರೆಸ್​ ಸೇರ್ಪಡೆಗೊಳ್ಳುತ್ತಿರುವ ಫೋಟೋ ಹಾಕಿ ಬರೆದುಕೊಂಡಿದ್ದಾರೆ. ಡಿಕೆಶಿ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳ ದಾಳಿ ಹಿನ್ನೆಲೆಯಲ್ಲಿ ಪ್ರಶಾಂತ್​ ಈ ಪೋಸ್ಟ್​ ಮಾಡಿದ್ದಾರೆನ್ನಲಾಗಿದೆ.
ಇದೇ ಬೆನ್ನಲ್ಲೇ ಕುಸುಮಾ ಅವರು ಫೇಸ್​ಬುಕ್​ ಮೂಲಕವೇ ಪ್ರಶಾಂತ್​ ಸಂಬರಗಿಗೆ ನಯವಾಗಿಯೇ ತಿರುಗೇಟು ನೀಡಿದ್ದಾರೆ. ಸಹೋದರ ಪ್ರಶಾಂತ್ ಸಂಬರಗಿಯವರಿಗೆ ಎಂದು ಹೆಸರು ನಮೂದಿಸಿ ವಿಷಯ ಆರಂಭಿಸಿರುವ ಕುಸುಮಾ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ. ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ಧ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವಸಮೂಹಕ್ಕೆ ಡ್ರಗ್ಸ್ ವಿರುದ್ಧ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ:ಮ್ಯಾನೇಜರ್ ಉದ್ಯೋಗ ತೊರೆದು ಸರಗಳ್ಳತನ: ಕಾರಣ ಕೇಳಿದ್ರೆ ಶಾಕ್​ ಆಗ್ತೀರಾ..!
ಮುಂದುವರಿದು ಟೀಕಾ ಪ್ರಹಾರ ಆರಂಭಿಸಿರುವ ಕುಸುಮಾ, ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ(Luck) ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ. ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ. ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ? ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಅದೃಷ್ಟ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹಾಥರಸ್​ನ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.
ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ಧಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ನಯವಾಗಿಯೇ ತಿರುಗೇಟು ನೀಡಿದ್ದಾರೆ.
https://www.facebook.com/kusumaforRRnagar/photos/a.109614230913146/114011517140084/
ಧರ್ಮಬೋಧಕನಿಗೆ ವಿದ್ಯಾರ್ಥಿನಿಯರೇ ಟಾರ್ಗೆಟ್​: ವೈರಲ್​ ಸ್ಕ್ರೀನ್​ಶಾಟ್​ನಲ್ಲಿವೆ ಕಾಮಪ್ರಚೋದಕ ಸಂದೇಶಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
