ಬೆಂಗಳೂರು:ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ-2023’ಕ್ಕೆ ಬಂಗಾಳಿ ಬರಹಾಗಾರ ಶೀರ್ಷೇಂದು ಮುಖ್ಯೋಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪುರಸ್ಕಾರವು ಐದು ಲಕ್ಷ ರೂ. ನಗದು ಹಾಗೂ ಬೆಳ್ಳಿ ಪದಕ ಒಳಗೊಂಡಿದೆ. ಕುವೆಂಪು ಅವರ ಜನ್ಮದಿನವಾದ ಡಿ.29ರಂದು ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಶೀರ್ಷೇಂದು ಮುಖ್ಯೋಪಾಧ್ಯಾಯ ಅವರು ತಮ್ಮ ಹೊಸತನದ ಬರವಣಿಗೆಗಳ ಮೂಲಕ ಬಂಗಾಳಿ ಸಾಹಿತ್ಯವನ್ನು, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ, ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳನ್ನು ಹೊರತಂದಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ ಸೇರಿ ಹಲವು ಪುರಸ್ಕಾರಕ್ಕೆ ಭಾಜನರಾಗಿರುವ ಶೀರ್ಷೇಂದು ಮುಖ್ಯೋಪಾಧ್ಯಾಯ ಅವರನ್ನು ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಮಾಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 15 =
Remember me
