ಬೆಂಗಳೂರು:ಸರ್ಕಾರಿ ಶಾಲೆಗಳಲ್ಲಿನ ಮೂಲ ಸೌಲಭ್ಯಗಳ ಕೊರತೆಯನ್ನು ನೀಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಹೈಕೋರ್ಟ್, ಪಾಲಕರಿಗೆ ಮೂರು ಹೊತ್ತಿನ ಊಟಕ್ಕಿಲ್ಲದಿದ್ದರೂ ಬೇರೆ ದಾರಿಯಿಲ್ಲದೆ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧಾರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೆ, ಮುಂದಿನ ಎಂಟು ವಾರಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು(ಶೌಚಗೃಹ, ಕುಡಿಯುವ ನೀರು) ಕಲ್ಪಿಸಿರುವ ಸಂಬಂಧ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಸರ್ಕಾರ ಉಚಿತ ಬಸ್ ಪ್ರಯಾಣ ಸೇರಿ ಯಾವುದೇ ಸೌಲಭ್ಯಗಳನ್ನು ಕಲ್ಪಿಸಿದರೂ, ನಮಗೆ ಅಭ್ಯಂತರವಿಲ್ಲ. ಆದರೆ, ಬಡ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲ ಸೌಲಭ್ಯಗಳುಳ್ಳ ವ್ಯವಸ್ಥೆ ಕಲ್ಪಿಸಬೇಕು ಎಂಬುದೇ ನಮ್ಮ ಆಶಯ ಎಂದು ಪೀಠ ಹೇಳಿತು.
ನಮ್ಮ ಸಂವಿಧಾನದ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕಾಗಿದೆ. ಆದರೆ, ಸರ್ಕಾರಗಳು ಸರ್ಕಾರಿ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸುವುದಕ್ಕೆ ಮುಂದಾಗಿಲ್ಲ. ಇದು ಪರೋಕ್ಷವಾಗಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ತಳ್ಳುವಂತೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿತು.
ಅಲ್ಲದೆ, ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆಯಿರುವ ಅಂಶ ಸರ್ಕಾರದ ಗಮನಕ್ಕೆ ಬಂದಲ್ಲಿವೇ, ೨೦೧೩ರಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ನಡೆಯುತ್ತಿದೆ. ಈವರೆಗೂ ೪೬೪ ಶಾಲೆಗಳಲ್ಲಿ ಶೌಚಗೃಹ ಹಾಗೂ ೩೨ ಶಾಲೆಗಳಲ್ಲಿ ಕುಡಿಯಲು ಶುದ್ದವಾದ ನೀರಿನ ಸೌಲಭ್ಯ ಕೊರತೆಯಿದೆ. ಆದರೂ ಸರ್ಕಾರ ಕ್ರಮಕ್ಕೆ ಮುಂದಾಗಿಲ್ಲ. ಆ ಮೂಲಕ ಪರೋಕ್ಷವಾಗಿ ಖಾಸಗಿ ಶಾಲೆಗಳನ್ನು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.
ಜತೆಗೆ, ಹಣವಿರುವ ಪಾಲಕರು ಎಲ್ಲ ಸೌಲಭ್ಯಗಳುಳ್ಳ ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. ಬಡವರ ಮಕ್ಕಳು ಸೌಲಭ್ಯಗಳುಳ್ಳ ಶಾಲೆಗಳಲ್ಲಿ ಶಿಕ್ಷಣ ಪಡೆಯಬಾರದೇ? ಹೀಗಾದರೆ ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ? ಎಂದು ನ್ಯಾಯ ಪೀಠ ಪ್ರಶ್ನಿಸಿತು.
ಅಂಬೇಡ್ಕರ್ ಅವರು ಯಾವುದೇ ಭಾವಚಿತ್ರವನ್ನು ನೋಡಿದರೂ ಪುಸ್ತಕವನ್ನು ಹಿಡಿದುಕೊಂಡಿರುತ್ತಾರೆ. ಅದರ ಉದ್ದೇಶವೇ ಶಿಕ್ಷಣದ ಮಹತ್ವವನ್ನು ತಿಳಿಸುವುದಾಗಿದೆ. ಮುಂದುವರಿದ ಕೆಲ ದೇಶಗಳಲ್ಲಿ ರಕ್ಷಣಾ ಇಲಾಖೆಗಿಂತಲೂ ಹೆಚ್ಚಿನ ಪ್ರಮಾಣದ ಅನುದಾನವನ್ನು ಶಿಕ್ಷಣಕ್ಕೆ ಮೀಸಲಿಟ್ಟಿದ್ದಾರೆ. ರಾಜ್ಯ ಸಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪೀಠ ಅಭಿಪ್ರಾಯ ವ್ಯಕ್ತ ಪಡಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fifteen =
Remember me
