ಬೆಂಗಳೂರುನದಿ ನೀರಿನ ವಿವಾದಗಳನ್ನು ಬಗೆಹರಿಸುವ ವಿಚಾರದಲ್ಲಿ ದೇಶದಲ್ಲಿ ನೀರು ಮತ್ತು ಹಣದ ಕೊರತೆಯಿಲ್ಲ. ಆದರೆ ದೂರದೃಷ್ಟಿ, ಪ್ರಾಮಾಣಿಕತೆಯ ಕೊರತೆಯಿದೆ ಎಂದು ಕೇಂದ್ರದ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಡಾ. ಎಂ. ಎಸ್. ರಾಮಯ್ಯ ಅವರ ಆಂಗ್ಲಭಾಷಾ ಆತ್ಮಕತೆ ’ರಾಮೈಯಾನಂ’ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ನಾನು ಜಲಸಂಪನ್ಮೂಲ ಸಚಿವನಾಗಿದ್ದ ವೇಳೆ ಗೋದಾವರಿ ನದಿಯಿಂದ 1,300 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರಕ್ಕೆ ಸೇರುತ್ತಿರುವುದು ನನ್ನ ಅರಿವಿಗೆ ಬಂತು. ಈ ನೀರನ್ನು ಬಳಸುವ ಚಿಂತನೆ ನಡೆಸಿದೆ. ಇದಕ್ಕಾಗಿ ಪೊಲವರಂ ಯೋಜನೆ ಜಾರಿಗೊಳಿಸಲಾಯಿತು. ಗೋದಾವರಿಯಿಂದ, ಕೃಷ್ಣಾ, ಪೆನ್ನಾರ್‌ಗೆ ನೀರು ಹರಿಸಿ ಅಂತಿಮವಾಗಿ ಕಾವೇರಿಗೆ ನೀರು ಹರಿಸುವ ಯೋಜನೆ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.
ಜಲಸಂಪನ್ಮೂಲ ಸಚಿವನಾಗಿ 23 ಅಂತಾರಾಜ್ಯ ಜಲ ಸಮಸ್ಯೆಗಳಲ್ಲಿ 18 ಸಮಸ್ಯೆಗಳನ್ನು ಪರಿಹರಿಸಿದ್ದೆ. ಆದರೆ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಇರುವ ಕಾವೇರಿ ವಿವಾದ ಪರಿಹರಿಸಲು ಸಾಧ್ಯವಾಗಲಿಲ್ಲ. ಸಮಸ್ಯೆಗಳನ್ನು ಪರಿಹರಿಸುವ ವೇಳೆ ಜಲ ವಿವಾದಗಳಲ್ಲಿ ಭಾಗಿಯಾಗಿದ್ದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಂದು ಕೊಠಡಿಯಲ್ಲಿ ಕೂಡಿ ಹಾಕಿ ಸಮಸ್ಯೆ ಪರಿಹರಿಸದೆ ಹೊರಗೆ ಹೋಗುವಂತಿಲ್ಲ ಎಂದು ಹೇಳುತ್ತಿದ್ದೆ, ಈ ತಂತ್ರ ಯಶಸ್ಸು ಕಂಡಿತು ಎಂಬ ಮಾಹಿತಿಯನ್ನು ಂಚಿಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 3 =
Remember me
