ವಿಜಯಪುರ:ಜ್ಞಾನಯೋಗಾಶ್ರಮದ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆ ಅವರ ಅಂತಿಮ ದರ್ಶನಕ್ಕೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸರಿ ಸುಮಾರು ಹದಿನೈದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದರು.
ಸೋಮವಾರ ಪೂಜ್ಯರು ಇನ್ನಿಲ್ಲ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಆಶ್ರಮದ ಎದುರು ಲಕ್ಷಾಂತರ ಭಕ್ತರು ಸೇರಿದ್ದರು. ಇಡೀ ರಾತ್ರಿ ಎರಡು ಲಕ್ಷಕ್ಕೂ ಅಧಿಕ ಜನರು ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ.
ಮಂಗಳವಾರ ಬೆಳಗ್ಗೆ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ ಇರುತ್ತದೆ ಎಂದು ತಡರಾತ್ರಿ ಜಿಲ್ಲಾಡಳಿತ ಪ್ರಕಟಿಸಿದ ಬೆನ್ನಲ್ಲೇ, ಸೂಯೋರ್ದಯಕ್ಕೂ ಮುನ್ನವೇ ಅಪಾರ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದರು. ಬೆಳಗ್ಗೆ 4.30ಕ್ಕೆ ತೆರೆದ ವಾಹನದಲ್ಲಿ ಶ್ರೀಗಳ ಪಾರ್ಥಿವ ಶರೀರ ಹೊತ್ತು ಸೈನಿಕ ಶಾಲೆಗೆ ತರಲಾಯಿತು. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಎಲ್ಲ ಸಿದ್ಧತೆ ಮಾಡಲಾಗಿತ್ತು. ಸಂಜೆವರೆಗೂ ನಿರೀಕ್ಷೆಗೂ ಮೀರಿ ಭಕ್ತರು ದರ್ಶನ ಪಡೆದರು.

ಮಧ್ಯಾಹ್ನದ ಹೊತ್ತಿಗೆ ಭಕ್ತರ ಸಂಖ್ಯೆ ಇಮ್ಮಡಿ ಆಗಿದ್ದರಿಂದ ನೂಕುನುಗ್ಗಲು ಆರಂಭವಾಯಿತು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಆದರೆ, ಜನರು ಬ್ಯಾರಿಕೇಡ್​ಗಳನ್ನು ದಾಟಿಕೊಂಡು ಒಳಗೆ ನುಗ್ಗಿದರು.
ಸಂಜೆ ಜನರ ನಿಯಂತ್ರಣ ಹಂತಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ಸಚಿವರು, ಶಾಸಕರು, ಮಾಜಿ ಸಚಿವ, ಶಾಸಕರು, ವಿವಿಧ ಮಠಾಧೀಶರು ಉಪಸ್ಥಿತಿಯಲ್ಲಿ ಶ್ರೀಗಳಿಗೆ ಸಕಲ ಸರ್ಕಾರಿ ಗೌರವಗಳು ನಡೆದವು.

ಬಳಿಕ ಶ್ರೀಗಳ ಪಾರ್ಥಿವ ಶರೀರದ ಮೆರವಣಿಗೆ ಸೈನಿಕ ಶಾಲೆಯಿಂದ ಆರಂಭವಾಗಿ ಜ್ಞಾನಯೋಗಾಶ್ರಮದವರೆಗೂ ಸಾಗಿತು. ಮೆರವಣಿಗೆಯುದ್ದಕ್ಕೂ ಭಕ್ತರು ಶ್ರೀಗಳ ಅಂತಿಮ ದರ್ಶನ ಪಡೆದರು. ಅಂತಿಮವಾಗಿ ಜ್ಞಾನಯೋಗಾಶ್ರಮದಲ್ಲಿ ಶ್ರೀಗಳ ಅಗ್ನಿಸಂಸ್ಕಾರ ಕ್ರಿಯೆಗಳು ನಡೆಯಿತು. ಬಸವಲಿಂಗ ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಅಗ್ನಿಸ್ಪರ್ಶ ಮಾಡಿದರು. ಕೊಬ್ಬರಿಯೊಳಗೆ ದೇಶಿ ಹಸುವಿನ ತುಪ್ಪ ಹಾಕಿ ಅಗ್ನಿಸ್ಪರ್ಶ ಮಾಡಲಾಯ್ತು. ಚಿತೆಗೆ ಶ್ರೀಗಂಧದ ಕಟ್ಟಿಗೆ, ಬೆರಣಿ, ದೇಶಿ ಹಸುವಿನ ತುಪ್ಪ ಬಳಸಲಾಗಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
