ಬೆಂಗಳೂರು:ಈ ಬಾರಿ ವಾಡಿಕೆಯಂತೆ ತುಸು ಹೆಚ್ಚು ಮಳೆಯಾದರೂ ಕೆಲ ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ಮುಂಗಾರು ಮುಗಿಯಲು ಇನ್ನೂ 5 ದಿನಗಳ ಬಾಕಿ ಇದ್ದು, ವಿವಿಧ ಜಿಲ್ಲೆ, ತಾಲೂಕು ಹಾಗೂ ಹೋಬಳಿಗಳಲ್ಲಿ ಸರಾಸರಿ ಶೇ.20ರಿಂದ ಶೇ. 59 ಮಳೆ ಕೊರತೆಯಾಗಿದೆ. ವಾಡಿಕೆಯಂತೆ ಈ ಬಾರಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿತ್ತು. ಆರಂಭದಲ್ಲಿ ಮಾರುತಗಳು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಕೆಲ ಭಾಗಗಳಲ್ಲಿ ಮಳೆ ಕೊರತೆಗೆ ಕಾರಣ.
ಜೂನ್‌ನಲ್ಲಿ ಗದಗ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಹಾಗೂ ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಸರಾಸರಿ ಶೇ.25ರಿಂದ ಶೇ.40 ಮಳೆ ಕೊರತೆಯಾದರೆ, 43 ತಾಲೂಕು ಹಾಗೂ 187 ಹೋಬಳಿಗಳಲ್ಲಿ ಮಳೆ ಅಭಾವ ಉಂಟಾಗಿತ್ತು. ಜುಲೈನಲ್ಲಿ ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ಹಾಸನ ಸೇರಿ 6 ಜಿಲ್ಲೆಗಳಲ್ಲಿ ಶೇ.24ರಿಂದ ಶೇ. 46 ಮಳೆ ಕೊರತೆಯಾದರೆ, 41 ತಾಲೂಕು ಹಾಗೂ 139 ಹೋಬಳಿಗಳಲ್ಲಿ ವಾಡಿಕೆಕ್ಕಿಂತ ಕಡಿಮೆ ಮಳೆಯಾಗಿದೆ. ಆಗಸ್ಟ್‌ನಲ್ಲಿ ಮಂಡ್ಯ, ರಾಮನಗರ ಹಾಗೂ ಬೆಂಗಳೂರಿನಲ್ಲಿ ಸರಾಸರಿ ಶೇ.40 ಮಳೆ ಕೊರತೆಯಾದರೆ, 48 ತಾಲೂಕು ಹಾಗೂ 212 ಹೋಬಳಿಗಳಲ್ಲಿ ಮಳೆ ವಾಡಿಕೆಕ್ಕಿಂತ ಕಡಿಮೆ ಮಳೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿ ಅಂಶಗಳಲ್ಲಿ ತಿಳಿದುಬಂದಿದೆ.
ಜೂನ್‌ನಲ್ಲಿ 3 ಜಿಲ್ಲೆಯಲ್ಲಿ ಹೆಚ್ಚು ಮಳೆಜೂನ್‌ನಲ್ಲಿ ಚಿಕ್ಕಬಳ್ಳಾಪುರ, ಬೆಂಗಳೂರು ಮತ್ತು ರಾಮನಗರದಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾದರೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬೆಂ.ಗ್ರಾಮಾಂತರ, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ವಾಡಿಕೆಕ್ಕಿಂತ ತುಸು ಹೆಚ್ಚು ಮಳೆಯಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಉತ್ತರ ಕನ್ನಡ, ಹಾವೇರಿ, ದಾವಣಗೆರೆ, ಉಡುಪಿ ಮತ್ತು ಕೋಲಾರದಲ್ಲಿ ವಾಡಿಕೆಯಷ್ಟೇ ಮಳೆಯಾಗಿದೆ.
ಜುಲೈನಲ್ಲಿ 17 ಜಿಲ್ಲೆಯಲ್ಲಿ ಹೆಚ್ಚು ಮಳೆಜುಲೈನಲ್ಲಿ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ ಹಾಗೂ ಚಾಮರಾಜನಗರ ಸೇರಿ 17 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆಯಾದರೆ, ದಾವಣಗೆರೆ ಮತ್ತು ಬೀದರ್ ವಾಡಿಕೆಕ್ಕಿಂತ ತುಸು ಹೆಚ್ಚು ಮಳೆಯಾಗಿದೆ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಉಡುಪಿ ಹಾಗೂ ಮೈಸೂರು ಸೇರಿ 5 ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆಯಾಗಿದೆ.
ಆಗಸ್ಟ್‌ನಲ್ಲಿ 3 ಜಿಲ್ಲೆಯಲ್ಲಿ ಹೆಚ್ಚು ಮಳೆಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡದಲ್ಲಿ ವಾಡಿಕ್ಕೆಕ್ಕಿಂತ ಹೆಚ್ಚು ಮಳೆಯಾದರೆ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ಹಾವೇರಿ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ವಾಡಿಕೆಕ್ಕಿಂತ ತುಸು ಹೆಚ್ಚು ಮಳೆಯಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂ. ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರದಲ್ಲಿ ವಾಡಿಕೆಯಷ್ಟೇ ಮಳೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
