ಬೆಂಗಳೂರು:ಕೆಲವು ದಿನಗಳ ಹಿಂದೆ ರಕ್ತದಾನ ಶಿಬಿರದಲ್ಲಿ ಬಿಜೆಪಿಯ ಶಾಸಕರು, ಸಂಸದರೊಂದಿಗೆ ವೇದಿಕೆ ಹಂಚಿಕೊಂಡು ಸುದ್ದಿಯಾಗಿದ್ದ ನಗರದ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಮತ್ತೊಮ್ಮೆ ಸುದ್ದಿಯಲ್ಲಿದ್ದಾನೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ದೇವಾಲಯಗಳಲ್ಲಿ ಭಕ್ತರಿಗೆ ಸೈಲೆಂಟ್ ಸುನಿಲನ ಕಡೆಯಿಂದ ಲಡ್ಡು ವಿತರಣೆ ಜೋರಾಗಿ ನಡೆದಿದೆ.
ಸದ್ಯ ರೌಡಿಸಂ ಬಿಟ್ಟಿರುವುದಾಗಿ ಹೇಳುತ್ತಲೇ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಸೈಲೆಂಟ್ ಸುನೀಲ ಭಕ್ತರಿಗೆ ಲಡ್ಡು ಪ್ರಸಾದ ಹಂಚಿದ್ದಾನೆ. ಲಡ್ಡು ಪ್ರಸಾದದ ಕವರ್‌ ಮೇಲೆ ಸೈಲೆಂಟ್ ಸುನೀಲನ ಫೋಟೋ ಜತೆ ಸಮಾಜ ಸೇವಕರು ಎಂಬ ಅಡಿಬರಹ ರಾರಾಜಿಸಿವೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಇಷ್ಟು ದಿನ ಹಳೆಯ ಪ್ರಕರಣಗಳಿಂದಾಗಿ ಪೊಲೀಸ್ ಠಾಣೆ, ಕೋರ್ಟ್ ಅಂತ ಅಲೆದಾಡುತ್ತಿದ್ದ ಸುನೀಲ ಸೈಲೆಂಟಾಗಿ ಸಮಾಜಮುಖಿ ಕಾರ್ಯಗಳು, ಟೆಂಪಲ್ ರನ್‌ನಲ್ಲಿ ತೊಡಗಿರುವುದರಿಂದ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾನೆ ಎಂಬ ಮಾತಿಗೆ ಇದು ಮತ್ತಷ್ಟು ಪುಷ್ಟಿ ನೀಡುತ್ತಿದೆ.

ಇತ್ತೀಚಿಗೆ ಚಾಮರಾಜಪೇಟೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ ಜತೆ ಕೇಸರಿ ಶಾಲು ಧರಿಸಿ ಸೈಲೆಂಟ್ ಸುನೀಲ ವೇದಿಕೆ ಹಂಚಿಕೊಂಡಿದ್ದ. ಆ ವಿಡಿಯೋ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಲ್ಲದೇ ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿತ್ತು.
ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ

ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
