ಬೆಳಗಾವಿ:ಹಣಕ್ಕೆ ಬೇಡಿಕೆಯಿಟ್ಟು ಹೆಸ್ಕಾಂ ಅಧಿಕಾರಿ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ ಆರೋಪದ ಮೇಲೆ ದೂರುದಾರೆ ಸೇರಿದಂತೆ 13 ಮಂದಿಗೆ ಆರೋಪಿಗಳಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 86 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಬಿ.ವಿ.ಸಿಂಧು ಸುಳ್ಳು ಕೇಸ್ ದಾಖಲಿಸಿ ಜೈಲು ಸೇರಿರುವ ಮಹಿಳೆ. ಅಪರಾಧಿ ಸಿಂಧು ಅಂದಿನ ಹೆಸ್ಕಾಂ ಸಹಾಯಕ ಅಧೀಕ್ಷಕ ಅಭಿಯಂತರರಾದ ತುಕಾರಾಮ್ ಮಜ್ಜಿಗೆಯವರ ವಿರುದ್ಧ ಅತ್ಯಾಚಾರ ಹಾಗೂ ಜೀವ ಬೆದರಿಕೆ ಕೇಸ್ ದಾಖಲಿಸಿದ್ದಳು. ಸುಳ್ಳು ಕೇಸ್ ಎಂದು ವಿಚಾರಣೆ ವೇಳೆ ಸಾಬೀತಾದ ಹಿನ್ನೆಲೆ ದೂರುದಾರೆ ಬಿ.ವಿ ಸಿಂಧು ಸೇರಿ 13 ಜನರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ:ಗೂಗಲ್​ ಮ್ಯಾಪ್​ ಅವಾಂತರ; ರಸ್ತೆ ಬಿಟ್ಟು ನದಿಗೆ ಇಳಿದ ಕಾರು, ಮುಂದಾಗಿದ್ದೇನು?
2014ರ ನವೆಂಬರ್ 19ರಂದು ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್​ ಠಾಣೆಯಲ್ಲಿ ಅತ್ಯಾಚಾರ, ಜೀವ ಬೆದರಿಕೆ, ಆತ್ಮಹತ್ಯೆ ಪ್ರಚೋದನೆ ಆರೋಪ ಮಾಡಿ ಮಹಿಳೆಯೊಬ್ಬರು ಕೇಸ್ ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಮಾಳಮಾರುತಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಅತ್ಯಾಚಾರ, ಜೀವ ಬೆದರಿಕೆ ಹಾಕಿದ್ದು ಸುಳ್ಳು ಎಂದು ತನಿಖೆಯಲ್ಲಿ ಬಯಲಾಗಿತ್ತು. ವಿಚಾರಣೆ ವೇಳೆ ಪ್ರಕರಣದ ಇತರೆ ಆರೋಪಿಗಳಿಂದ ಪ್ರಭಾವಿತಳಾಗಿ ಸುಳ್ಳು ದೂರು ದಾಖಲಿಸಿದ್ದಾಗಿ ಸಿಂಧು ತಪ್ಪೊಪ್ಪಿಕೊಂಡಿದ್ದಳು.
2017ರಲ್ಲಿ ದೂರುದಾರೆ ಸಿಂಧು ಸೇರಿದಂತೆ ಪ್ರಕರಣದ ಇತರೆ ಆರೋಪಿಗಳ ವಿರುದ್ಧ ತುಕಾರಾಮ್​ ಮಜ್ಜಿಗೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 13 ಜನ ಸಾಕ್ಷಿದಾರರಿಂದ 81 ಸಾಕ್ಷಿಗಳನ್ನು ಪೊಲೀಸರು ಸಂಗ್ರಹಿಸಿದ್ದರು. ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, ತಲಾ 86 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಮೂರ್ತಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eight =
Remember me
