ಬಾಗಲಕೋಟೆ:ರಸ್ತೆ ಬದಿಯಲ್ಲಿ ಹತ್ತಾರು ಜನರ ಎದುರೇ ವಕೀಲೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಗಂಭೀರವಾಗಿ ಹಲ್ಲೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಮಾತ್ರವಲ್ಲ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಂಗೀತಾ ಸಿಕ್ಕೇರಿ ಎಂಬಾಕೆ ಹಲ್ಲೆಗೊಳಗಾದ ವಕೀಲೆ. ಮಹಾಂತೇಶ್ ಚೊಳಚಗುಡ್ಡ ಎಂಬಾತ ಬಂಧನಕ್ಕೆ ಒಳಗಾಗಿರುವ ಆರೋಪಿ. ಬಾಗಲಕೋಟೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿತ್ತು. ಸಂಜೆಯೊಳಗಾಗಿ ಬಾಗಲಕೋಟೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ರಸ್ತೆ ಬದಿಯಲ್ಲಿ ಸಾರ್ವಜನಿಕರ ಎದುರೇ ಸಂಗೀತಾ ಮೇಲೆ ಮಹಾಂತೇಶ್ ಹಲ್ಲೆ ನಡೆಸಿದ್ದು, ಒದೆ ಕೂಡ ಕೊಟ್ಟಿದ್ದಾನೆ. ಈ ಸಂದರ್ಭದಲ್ಲಿ ಆಕೆಯ ಜತೆಗಿದ್ದ ಪತಿಗೂ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಇಬ್ಬರನ್ನೂ ಬಳಿಕ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆಯ ದೃಶ್ಯಾವಳಿ ಇರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ್​ನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಒಪ್ಪಿಸಲಾಗುವುದು ಎಂದು ಎಸ್​​ಪಿ ಲೋಕೇಶ್ ಜಗಲಾಸರ್ ತಿಳಿಸಿದ್ದಾರೆ.
ಮತ್ತೊಂದೆಡೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಮಾಜಿ ಸಚಿವ ಎಚ್.ವೈ. ಮೇಟಿ ಸೇರಿ ಕಾಂಗ್ರೆಸ್​ನ ಹಲವು ಮುಖಂಡರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಹಲ್ಲೆ ಘಟನೆಯನ್ನು ಖಂಡಿಸಿದ್ದಾರೆ.
ಮತ್ತೆ ಆಪರೇಷನ್ ಕಮಲ; ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಖಚಿತ: ಸಚಿವ ಸೋಮಶೇಖರ್

ಕೇರಳಕ್ಕೆ ಮೇ 27ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಯಾವಾಗ? ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 7 =
Remember me
