ರಾಮನಗರ:ಯುವತಿಯೊಬ್ಬಳ ಮೇಲೆಯೇ ಕಾರು ಸಾಗಿ ಸಂಭವಿಸಿದ ಅಪಘಾತದಲ್ಲಿ ಆಕೆ ಸಾವಿಗೀಡಾಗಿದ್ದು, ಉದ್ರಿಕ್ತ ಜನರು ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್​ಪೋಸ್ಟ್ ಬಳಿ ಈ ಅಪಘಾತ ಸಂಭವಿಸಿದೆ. ಈ ಪ್ರಕರಣದಲ್ಲಿ ರಘುನಾಥಪುರ ಗ್ರಾಮದ ಯುವತಿ ಚೇತನಾ (22) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹಾಸನ ಹಾಗೂ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿವೃತ್ತ ಯೋಧರೊಬ್ಬರ ಕಾರು ಚೇತನಾಗಿ ಡಿಕ್ಕಿ ಹೊಡೆದು, ಆಕೆಯ ಮೇಲೇ ಹರಿದು ಹೋಗಿದ್ದರಿಂದ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಅಪಘಾತದ ಬಳಿಕ ಸ್ಥಳೀಯರು ಹೆದ್ದಾರಿಯಲ್ಲಿ ಟಯರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದು, ಹೆದ್ದಾರಿಯವರು ಸೂಕ್ತ ನಿರ್ವಹಣೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರತಿಭಟನೆಯಿಂದಾಗಿ ಸುಮಾರು 2 ಗಂಟೆಗಳ ಕಾಲ ರಸ್ತೆ ತಡೆಯಾಗಿದ್ದು, ರಸ್ತೆಯ ಎರಡೂ ಕಡೆ ಕಿಲೋಮೀಟರ್​ಗಟ್ಟಲೆ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದು ಕಂಡು ಬಂತು. ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಈ ಅಪಘಾತ ಸಂಭವಿಸಿದೆ.
ಅಪ್ಪನಿಗೆ 31 ವರ್ಷ ಜೈಲು, ಅದರ ಬೆನ್ನಿಗೆ ಮಗನಿಗೂ ಭಯೋತ್ಪಾದಕ ಪಟ್ಟ!

ಇಬ್ಬರು ಮಾಜಿ ಸಿಎಂ, ಕುಂ.ವೀ. ಸೇರಿ 61ಕ್ಕೂ ಅಧಿಕ ಸಾಹಿತಿಗಳಿಗೆ ಕೊಲೆ ಬೆದರಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
