ಬೆಂಗಳೂರುಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸೆ.3ರಂದು ರಾಜ್ಯದ 35 ಶೈಕ್ಷಣಿಕ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಎರಡು ಪತ್ರಿಕೆಗಳಿಂದ 3.33 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪತ್ರಿಕೆ -1(1-5ನೇ ತರಗತಿ) 1,43,705 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, 544 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದೇ ರೀತಿ ಪತ್ರಿಕೆ-2(6-8ನೇ ತರಗತಿ) 1,89,994 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 711 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪತ್ರಿಕೆ-1 ಬೆಳಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಪತ್ರಿಕೆ-2 ಮಧ್ಯಾಹ್ನ 2 ಗಂಟೆ 4.30ರ ವರೆಗೆ ನಡೆಯಲಿದೆ.
ಭಾಷಾ ವಿಷಯಗಳ ಹೊರತಾಗಿ ಉಳಿದ ಎಲ್ಲ ವಿಷಯಗಳ ಪರೀಕ್ಷೆಗಳು ಕನ್ನಡ, ಇಂಗ್ಲಿಷ್, ಉರ್ದು, ತಮಿಳು, ತೆಲುಗು, ಹಿಂದಿ ಮತ್ತು ಮರಾಠಿ ಮಾಧ್ಯಮಗಳಲ್ಲಿ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − twelve =
Remember me
