ಬೆಂಗಳೂರು:‘ಲಕ್‌ಪತಿ ದೀದಿ’ ಯೋಜನೆಯ ಅನುದಾನವನ್ನು ಎರಡು ಕೋಟಿ ರೂ.ನಿಂದ ಮೂರು ಕೋಟಿ ರೂ.ಗೆ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಈ ಯೋಜನೆಯು ಮಹಿಳೆಯರಿಗೆ ಸ್ವ-ಸಹಾಯ ಗುಂಪುಗಳಲ್ಲಿ (ಎಸ್‌ಎಚ್‌ಜಿ) ತರಬೇತಿ ನೀಡುವ ಗುರಿ ಹೊಂದಿದ್ದು, ಇದರಿಂದ ವರ್ಷಕ್ಕೆ ಕನಿಷ್ಠ 1 ಲಕ್ಷ ರೂಪಾಯಿಗಳ ಸುಸ್ಥಿರ ಆದಾಯ ಗಳಿಸಬಹುದಾಗಿದೆ. ಒಂಬತ್ತು ಕೋಟಿ ಮಹಿಳೆಯರಿಂದ 83 ಲಕ್ಷ ಸ್ವ-ಸಹಾಯ ಗುಂಪುಗಳು ಸಬಲೀಕರಣ ಮತ್ತು ಸ್ವಾವಲಂಬನೆಯೊಂದಿಗೆ ಗ್ರಾಮೀಣ ಸಾಮಾಜಿಕ-ಆರ್ಥಿಕ ಪರಿವರ್ತನೆಗೆ ಸಹಕಾರಿಯಾಗಲಿದೆ ಎನ್ನವುದು ಸರ್ಕಾರದ ಆಶಯ.
ಈ ಯೋಜನೆಯು ಈಗಾಗಲೆ ಒಂದು ಕೋಟಿ ಮಹಿಳೆಯರಿಗೆ ‘ಲಕ್‌ಪತಿ ದೀದಿ’ ಯಾಗಲು ನೆರವಾಗಿದ್ದು, ಅವರು ಇತರರಿಗೆ ಸ್ಫೂರ್ತಿಯಾಗಿದ್ದಾರೆ. ಅಂತಹವರನ್ನು ಗೌರವಿಸುವ ಮೂಲಕ ಅವರ ಸಾಧನೆಗಳನ್ನು ಗುರುತಿಸಲಾಗುತ್ತದೆ. ಈ ಯೋಜನೆಯ ಯಶಸ್ಸಿನಿಂದ ಉತ್ತೇಜನಗೊಂಡು ‘ಲಕ್‌ಪತಿ ದೀದಿ’ಯ ಅನುದಾನದ ಗುರಿಯನ್ನು ಎರಡು ಕೋಟಿ ರೂ.ನಿಂದ ಮೂರು ಕೋಟಿ ರೂ.ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವಿತ್ತ ಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
