ಹಾಸನ:ತರಕಾರಿ ಬೆಲೆಗಳು ಗಗನಕ್ಕೇರಿದ ಬೆನ್ನಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮ್ಯಾಟೋ ಬೆಲೆಯನ್ನು ಕಳ್ಳತನ ಮಾಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಟೊಮ್ಯಾಟೋ ಬೆಲೆ ಕಳ್ಳತನವಾಗಿದ್ದು, ಜಮೀನಿನ ಮಾಲೀಕ ಸೋಮಶೇಖರ್ ಹಾಗೂ ಅವರ ಪುತ್ರ ಧರಣಿ ಹಳೇಬೀಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಮೀನಿನ ಮಾಲೀಕ ಸೋಮಶೇಖರ್ ಅನಾರೋಗ್ಯದಿಂದ ಬಳಲುತ್ತಿದ್ದರು ಸಹ ಟೊಮ್ಯಾಟೋ ಬೆಲೆಯನ್ನು ಬೆಳೆದಿದ್ದರು. ಕಳೆದ ಮೂರು ದಿನಗಳಿಂದ ಟೊಮ್ಯಾಟೋವನ್ನು ಕೊಯ್ದು ಮಾರಾಟ ಮಾಡುತ್ತಿದ್ದರು. ಬಾಕಿ ಉಳಿದಿರುವ ಬೆಳೆಯನ್ನು ಬುಧವಾರ ಕಟಾವು ಮಾಡಲು ಯೋಜಿಸಿದ್ದರು. ಆದರೆ, ಬುಧವಾರ ಬೆಳಗ್ಗೆ ಸೋಮಶೇಖರ್​ ಅವರ ಪುತ್ರ ಧರಣಿ ಜಮೀನಿಗೆ ತೆರಳಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ತಂದೆಯಿಂದ ಬಚಾವಾಗಲು ಮನೆ ಬಿಟ್ಟಳು; ರಕ್ಷಣೆ ಕೊಡ್ತೇವೆ ಎಂದ ಪರರ ನಂಬಿ ಕೆಟ್ಟಳು!
ಮಂಗಳವಾರ ತಡರಾತ್ರಿ ಸೋಮಶೇಖರ್​ ಅವರ ಹೊಲಕ್ಕೆ ನುಗ್ಗಿರುವ ಕಳ್ಳರು 50 ಕೆಜಿ ತೂಕದ 60 ಬ್ಯಾಗ್​ಗಳಷ್ಟು ಟೊಮ್ಯಾಟೋ ಕದ್ದು ಪರಾರಿಯಾಗಿದ್ದಾರೆ. ಇದರ ಮೌಲ್ಯ 1.5 ಲಕ್ಷ ಎಂದು ಅಂದಾಜಿಸಲಾಗಿದ್ದು, ಹಳೇಬೀಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡು ಸ್ಥಳ್ಕಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ದೂರುದಾರರಿಗೆ ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
