ಬೆಳಗಾವಿ:ವಿಪಕ್ಷ ನಾಯಕನಿಲ್ಲದೆ ಅಧಿವೇಶನ ನಡೆದಿರುವುದು ದುರಂತದ ಕಥೆ. ಅಧಿವೇಶನ ಮುಗಿದರೂ ಬಿಜೆಪಿಯವರ ಕೈಯಲ್ಲಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಅಥಣಿ ವಿಧಾನಸಭೆ ಕ್ಷೇತ್ರದ ಶಾಸಕ ಲಕ್ಷ್ಮಣ್​ ಸವದಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಈ ಕುರಿತು ಮಾತನಾಡಿದ ಸವದಿ ಇಂತಹದೊಂದು ಬೆಳವಣಿಗೆ ನಡೆದಿರುವುದು ಇತಾಹಸದಲ್ಲೇ ಇದೇ ಮೊದಲು. ಇಂತಹ ಇತಿಹಾಸವನ್ನು ಸೃಷ್ಟಿಸಲು ಬಿಜೆಪಿಯವರಿಂದ ಮಾತ್ರ ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಹುಲಿ ಗಣತಿ 2022; ಮತ್ತೊಮ್ಮೆ ನಿರಾಸೆ ಅನುಭವಿಸಿದ ಕರ್ನಾಟಕ
ಹೊಸ ಸರ್ಕಾರ ರಚನೆಯಾದ ಮೇಲೆ ಶಾಸಕರು ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಬಳಿ ತಿಳಿಸುವುದು ವಾಡಿಕೆ. ರಾಹುಲ್​ ಗಾಂಧಿ ಹಿರಿಯ ಕಾಂಗ್ರೆಸ್​ ನಾಯಕರ ಸಭೆ ಕರೆದಿದ್ದ ಕಾರಣ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿತ್ತು. ಕಾಂಗ್ರೆಸ್​ನಲ್ಲಿ ಯಾವುದೇ ಅಸಮಾಧಾನವಿಲ್ಲ. ವಿರೋಧ ಪಕ್ಷ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಲಕ್ಷ್ಮಣ್​ ಸವದಿ ಹಾಗೂ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ಗೆ ಕಾಂಗ್ರೆಸ್​ ಹೈಕಮಾಂಡ್​ ಜವಾಬ್ದಾರಿ ಕುರಿತು ಪ್ರತಿಕ್ರಿಯಿಸಿ ಅದು ಟಾಸ್ಕ್​ ಎನ್ನುವುದಕ್ಕಿಂತ ಒಂದು ಪಕ್ಷದಲ್ಲಿದ್ದಾಗ ಓಡಾಡಿ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆ ನಿಮಿತ್ತ ಆಗಸ್ಟ್​ 2ರಂದು ದೆಹಲಿಯಲ್ಲಿ ರಾಹುಲ್​ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಸಭೆ ಕರೆದಿದ್ದು, ಅಲ್ಲಿ ನಮಗೆ ಕೊಡುವ ಜವಾಬ್ಧಾರಿಯನ್ನು ನಿಭಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
