ಬೆಳಗಾವಿ:ಸಿದ್ದರಾಮಯ್ಯ ಅವರ ಹೇಳಿಕೆಯನ್ನು ತಿರುಚಿ ಹೇಳುವ ಮೂಲಕ ಬಿಜೆಪಿಯವರು ಜನರ ಭಾವನಗೆಳನ್ನು ಕೆರಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಇದೀಗ ಲಕ್ಷ್ಮಣ ಸವದಿ ಮಾಜಿ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸಿದ್ದಾರೆ.‘ಈಗಾಗಲೆ ಲಿಂಗಾಯತರೇ ಇಲ್ಲಿ ಚೀಫ್ ಮಿನಿಸ್ಟರ್ ಇದ್ದಾರಲ್ಲ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವರುಣದಲ್ಲಿ ಪ್ರಚಾರದ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ‘ಲಿಂಗಾಯತ ಸಮುದಾಯಕ್ಕೆ ಅವಮಾನ’ ಮಾಡಿದ್ದಾರೆ ಎಂದು ಬಿಜೆಪಿ ಅರೋಪಿಸಿತ್ತು.
ಇದನ್ನೂ ಓದಿ:ಕೂಡಲಸಂಗಮದಲ್ಲಿ ಅನ್ನ ದಾಸೋಹಕ್ಕೆ 5000 ರೂ. ದೇಣಿಗೆ ನೀಡಿದ ರಾಹುಲ್ ಗಾಂಧಿ
ಬಿಜೆಪಿ ಸರ್ಕಾರದಲ್ಲಿ 40% ಕಮೀಷನ್ ಆರೋಪ ವಿಚಾರ ವಿಚಾರವಾಗಿ, ನಿಜಕ್ಕೂ ಬಿಜೆಪಿಯಲ್ಲಿ ಭ್ರಷ್ಟಾಚಾರ ಇದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗಳಿಗೆ ಲಕ್ಷ್ಮಣ ಸವದಿ ಉತ್ತರಿಸುತ್ತಾ, ”ಇಲ್ಲ ಎಂದು ಯಾರು ಹೇಳ್ತಾರೆ” ಎಂದು ಮರು ಪ್ರಶ್ನೆ ಮಾಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ಸವದಿ ಹೇಳಿದರು.
ಬಿಜೆಪಿ ಅವರಿಗೆ ನಾವು ಒಂದು ಲೋಟ ನೀರೇ ಇರಬಹುದು. ಚುನಾವಣೆ ಆದ ಬಳಿಕ ನಾವು ತಂಬಿಗೆ ನೀರೋ? ಬಕೆಟ್ ನೀರೋ? ಯಾವ ನೀರು ಅಂತ ಗೊತ್ತಾಗುತ್ತದೆ. ಗೋಕಾಕ ಚುನಾವಣೆಯಲ್ಲಿ ಈ ಬಾರಿ ಮೌನ ಕ್ರಾಂತಿ ಆಗುತ್ತದೆ ಎಂದು ಹೇಳುವ ಮೂಲಕ ಶೆಟ್ಟರ್ ಹಾಗೂ ಸವದಿ ಪಕ್ಷ ಬಿಟ್ಟದ್ದು ಸಮುದ್ರದಲ್ಲಿನ ಒಂದು ಲೋಟ ನೀರು ತೆಗೆದಂತೆ ಎಂಬ ಬಿಜೆಪಿಗರ ಹೇಳಿಕೆ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ:ಲಿಂಗಾಯತ ವಿರೋಧಿ ಎಂದು ಬಿಂಬಿಸಲು ಹೇಳಿಕೆ ತಿರುಚಿದ್ದಾರೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
