ಚಿಕ್ಕೋಡಿ (ಬೆಳಗಾವಿ):ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಿಬ್ಬಂದಿಗೆ ಒಂದು ವರ್ಷ ವೇತನ ಮತ್ತು ಭತ್ಯೆ ರಹಿತ ರಜೆ ಮಂಜೂರು ಮಾಡುವ ಬಗ್ಗೆ ಚರ್ಚೆ ಶುರುವಾದ ಬೆನ್ನಲ್ಲೇ ನೌಕರರ ಸಂಘಟನೆಗಳು ಇದನ್ನು ವಿರೋಧಿಸಿದ್ದು, 1.30 ಲಕ್ಷ ನೌಕರರ ಪಾಲಿಗೆ ಮರಣಶಾಸನ ಆಗಲಿದೆ ಎಂದು ಅಪಸ್ವರ ಎತ್ತಿವೆ.
ಇದರ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ಸಂಸ್ಥೆಯ ಯಾವುದೇ ಸಿಬ್ಬಂದಿಗೆ ವೇತನ ರಹಿತ ರಜೆ ಪಡೆಯುವಂತೆ ಒತ್ತಡ ಹಾಕಿಲ್ಲ. ಅಂತಹ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಇದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ.ಇದನ್ನೂ ಓದಿರಿಐವರ ಕೊಲೆಗೆ ಕಾರಣವಾಯ್ತು ಒಂದು ಲವ್​ ಸ್ಟೋರಿ!
ನಿಪ್ಪಾಣಿ ನಗರದಲ್ಲಿ ಶನಿವಾರ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, ಕೆಎಸ್​ಆರ್​ಟಿಸಿಯಲ್ಲಿ 1.30 ಲಕ್ಷ ಸಿಬ್ಬಂದಿ ಇದ್ದಾರೆ. ಅವರಲ್ಲಿ ಹೊಸ ಹೊಸ ಅಧ್ಯಯನ ಅಥವಾ ತರಬೇತಿಗೆ ತೆರಳುತ್ತೇವೆ ಎನ್ನುವ ಸಿಬ್ಬಂದಿಗೆ ಮಾತ್ರ ರಜೆ ನೀಡಲಾಗುತ್ತದೆ. ಈ ವಿಚಾರವಾಗಿ ಯಾವುದೇ ಸಿಬ್ಬಂದಿಗೆ ಒತ್ತಡ ಹಾಕಿಲ್ಲ ಎಂದರು.
ಕೋವಿಡ್​ ಪ್ರಕರಣ ಆರಂಭವಾದ ಬಳಿಕ ಸಾರಿಗೆ ಸಂಸ್ಥೆಗೆ 2,652 ಕೋಟಿ ರೂ. ನಷ್ಟವಾಗಿದೆ. ಪ್ರತಿ ತಿಂಗಳು ಸಂಸ್ಥೆಯ ಸಿಬ್ಬಂದಿಗೆ ವೇತನ ನೀಡಲು 126 ಕೋಟಿ ರೂ. ಅಗತ್ಯವಿದೆ. ಹೀಗಾಗಿ ಸಿಬ್ಬಂದಿ ವೇತನ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಾಗ, ಎರಡು ತಿಂಗಳ ವೇತನ ಬಿಡುಗಡೆ ಮಾಡಿದ್ದಾರೆ. ಅದನ್ನು ಈಗಾಗಲೇ ಸಿಬ್ಬಂದಿಗೆ ಪಾವತಿಸಲಾಗಿದೆ. 3ನೇ ತಿಂಗಳ ವೇತನವನ್ನು ಶೀಘ್ರವೇ ಜಮಾ ಮಾಡಲಾಗುವುದು. ಯಾವುದೇ ಕಾರಣಕ್ಕೂ ಸಿಬ್ಬಂದಿಗೆ ಸಂಬಳ ಕೊಡುವುದನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಕೆಎಸ್​ಆರ್​ಟಿಸಿ ಸಿಬ್ಬಂದಿಗೆ 1 ವರ್ಷ ವೇತನ ರಹಿತ ರಜೆ, ಲಕ್ಷಕ್ಕೂ ಹೆಚ್ಚು ನೌಕರರ ಪಾಲಿಗೆ ಮರಣಶಾಸನ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eleven =
Remember me
