ಬೆಳಗಾವಿ:ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದ್ರೆ ಗೋಕಾಕ್​ನಲ್ಲಿ ನಾನೇ ಅಭ್ಯರ್ಥಿ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಸಚಿವ ರಮೇಶ್​ ಜಾರಕಿಹೊಳಿ‌ ಟಾರ್ಗೆಟ್ ಮಾಡಿರುವ ವಿಚಾರ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ರಮೇಶ್​ ಜಾರಕಿಹೊಳಿಗೆ ಜನರಿಂದಲೇ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದು ಎಚ್ಚರಿಸಿದರು.ಇದನ್ನೂ ಓದಿರಿVideo| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಹಣಿಯಲು ಮತ್ತು ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ‌ ಸಾಧಿಸುವ ಯೋಜನೆಯೊಂದಿಗೆ ಸಚಿವ ರಮೇಶ್​ ಜಾರಕಿಹೊಳಿ ಗ್ರಾಮೀಣ ಕ್ಷೇತ್ರದಲ್ಲಿ ಇತ್ತೀಚಿಗೆ ಲಂಚ್ ಪಾಲಿಟಿಕ್ಸ್ ಮೊರೆ ಹೋಗಿದ್ದರು. ಗ್ರಾಪಂ ಕ್ಷೇತ್ರದಲ್ಲಿ ಗೆದ್ದವರಿಗೆ ಸನ್ಮಾನವೂ ನಡೆದಿತ್ತು.
ಈ ಕುರಿತು ಗರಂ ಆದ ಲಕ್ಷ್ಮೀ ಹೆಬ್ಬಾಳ್ಕರ್, ನಮ್ಮ ಸರ್ಕಾರವನ್ನೇ ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ? ಎಂಎಲ್​ಎ ಗಳನ್ನೇ ಎಸ್ಕೇಪ್ ಮಾಡಿದರು. ಅಂತಹವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ ಎಂದರು.ಇದನ್ನೂ ಓದಿರಿಬಂಧನ ವಾರಂಟ್​ ಜಾರಿಯಾಗುತ್ತಿದ್ದಂತೆ ಕೋರ್ಟ್​ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್​
ಲಕ್ಷ್ಮೀ ಹೆಬ್ಬಾಳ್ಕರ್​ರ ಈ ಹೇಳಿಕೆ ಬೆನ್ನಲ್ಲೇ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ಗೋಕಾಕ್​ನಿಂದ ಲಕ್ಷ್ಮೀ ಹೆಬ್ಬಾಳ್ಕರ್​ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್. ಬರಲಿ ಬಹಳ ಸಂತೋಷ. ಪ್ರಜಾಪ್ರಭುತ್ವ ಎಲ್ಲರಿಗೂ ಹಕ್ಕು ಕೊಟ್ಟಿದೆ ಎಂದರು.
ನಾನು ಜಿಲ್ಲಾ ಉಸ್ತುವಾರಿ ಸಚಿವ. ಎಲ್ಲರ ಹಿತ ಕಾಪಾಡುವುದು ನನ್ನ ಕೆಲಸ, ನನ್ನ ಕರ್ತವ್ಯ. ಜನರೇ ಹೆಬ್ಬಾಳ್ಕರ್​ಗೆ ಉತ್ತರ ನೀಡ್ತಾರೆ‌ ಎಂದರು. ಇನ್ನು ಸಮ್ಮಿಶ್ರ ಸರ್ಕಾರ ಹೇಗೆ ಬಿತ್ತು? ಏಕೆ ಹೈಜಾಕ್ ಆಯ್ತು? ಅನ್ನೊದರ ಬಗ್ಗೆ ಅವರ ಗಾಡ್ ಫಾದರ್​ ಅನ್ನೇ ಲಕ್ಷ್ಮೀ ಹೆಬ್ಬಾಳ್ಕರ್​ ಕೇಳಬೇಕು ಎಂದರು.
Video| ಬಿಜೆಪಿ ಮುಖಂಡನ ಬರ್ತ್ ​ಡೇ ಪಾರ್ಟಿಯಲ್ಲಿ ಜನರತ್ತ ಕಂತೆಕಂತೆ ಹಣ ಚೆಲ್ಲಿದ್ರು! ಈ ದೃಶ್ಯ ನೋಡಿದ್ರೆ ಸಿಟ್ಟಿಗೇಳ್ತೀರಿ

ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಬಂಧನ ವಾರಂಟ್​ ಜಾರಿಯಾಗುತ್ತಿದ್ದಂತೆ ಕೋರ್ಟ್​ಗೆ ದೌಡಾಯಿಸಿದ ನಟಿ ಪದ್ಮಜಾ ರಾವ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × three =
Remember me
