ಬೆಂಗಳೂರು: ರೈತರು ಖಾಸಗಿ ಜಮೀನುಗಳಲ್ಲಿ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಕಾಲುದಾರಿ, ಬಂಡಿದಾರಿ ಅಥವಾ ಓಡಾಟ ಸೌಲಭ್ಯ ಒದಗಿಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.
ತಹಸೀಲ್ದಾರರು ನಕಾಶೆಯಲ್ಲಿ ಕಂಡು ಬರುವ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಕೃಷಿ ಬಳಕೆದಾರರು ತಿರುಗಾಡಲು ಅಡ್ಡಿಪಡಿಸುವಂತಹ ಅಥವಾ ದಾರಿಗಳನ್ನು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸುವಂತೆ ಸರ್ಕಾರ ನಿರ್ದೇಶನ ನೀಡಿ ಸುತ್ತೊಲೆ ಹೊರಡಿಸಿದೆ.
ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸಲು ‘ದಾರಿ’ ಸಮಸ್ಯೆ ಇದ್ದು, ರೈತರಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ತಿಳಿದು ಬಂದಿರುತ್ತದೆ. ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿವೆ.
ಗ್ರಾಮ ನಕಾಶೆಯಲ್ಲಿರುವ ದಾರಿಗಳಲ್ಲಿ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಅಡ್ಡಿಯಾಗಿರುವುದು ಕಂಡು ಬಂದಿದೆ. ಜತೆಗೆ ರೈತರ ನಡುವಿನ ವೈಯಕ್ತಿಕ ದ್ವೇಷ,ಆಸೂಹೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಾಗುತ್ತಿವೆ.ಕರ್ನಾಟಕ ಭೂ ಕಂದಾಯ ನಿಯಮಗಳು 1966ರ ನಿಯಮ 89ರಲ್ಲಿ ದಾರಿಯ ಹಕ್ಕುಗಳು ಮತ್ತು ಇತರ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.ದಿ ಇಂಡಿಯನ್ ಎಸ್ಟಾಬ್ಲಿಷ್‌ಮೆಂಟ್ ಆ್ಯಕ್ಟ್ 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ ಹಕ್ಕು ಹೊಂದಿದ್ದು, ಇದಕ್ಕೆ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂಬುದಾಗಿ ತಿಳಿಸಿದೆ. ಅಗತ್ಯ ಬಿದ್ದಲ್ಲಿ ಈ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಕೂಡ ಅವಕಾಶವಿದೆ. ಅಲ್ಲದೆ, ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತಿಯಲ್ಲಿ ತಹಸೀಲ್ದಾರರು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.
ಈ ಹಿನ್ನೆಲೆಯಲ್ಲಿ ತಹಸೀಲ್ದಾರರು ನಕಾಶೆಯಲ್ಲಿರುವ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಕೃಷಿ ಬಳಕೆದಾರರು ತಿರುಗಾಡಲು ಅಡ್ಡಿಪಡಿಸುವಂತಹ ಅಥವ ಬಳಕೆಗೆ ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಬೇಕು ಎಂದು ಕಂದಾಯ ಇಲಾಖೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
