ಕಲಬುರಗಿ:ರಕ್ತಪಾತದ ಮೂಲಕ ಆಗಾಗ ಸುದ್ದಿಯಾಗುವ ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಇಲ್ಲಿನ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ತಲೆಯನ್ನೇ ಜಜ್ಜಿ ಹಾಕಲಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೌರ (ಕೆ) ಗ್ರಾಮದಲ್ಲಿ ಈ ಕೊಲೆ ನಡೆದಿದೆ.
ಇಲ್ಲಿನ ಶಿರವಾಳ ಗ್ರಾಮದ ಅಕ್ಷಯಕುಮಾರ್ ಕ್ಷತ್ರಿ (28) ಹತ್ಯೆಯಾದ ವ್ಯಕ್ತಿ. ಜಮೀನೊಂದರಲ್ಲಿ ಈ ವ್ಯಕ್ತಿಯನ್ನು ಅಟ್ಟಾಡಿಸಿದ ದುಷ್ಕರ್ಮಿಗಳನ್ನು ತಲವಾರ್​ನಿಂದ ಗಂಭೀರವಾಗಿ ಗಾಯಗೊಳಿಸಿದ್ದಲ್ಲದೆ, ತಲೆ ಮೇಲೆ ಕಲ್ಲು ಎತ್ತಿಹಾಕಿದ್ದು, ರುಂಡ ಪೂರ್ಣವಾಗಿ ಜಜ್ಜಿಹೋಗಿದೆ.
ಜಮೀನು ವಿಚಾರವಾಗಿ ಜಗಳ ನಡೆದು ಕೊಲೆಯಲ್ಲಿ ಅಂತ್ಯಗೊಂಡಿದೆ ಎನ್ನಲಾಗಿದೆ. ಮಲ್ಲು ಬಂಡೆ, ಹಣಮಂತ ಬಂಡೆ,‌ ನೀಲಪ್ಪ ಬಂಡೆ, ನೇಮಣ್ಣ ಬಂಡೆ ಎಂಬವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಈ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅಫಜಲಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 6 =
Remember me
