ಬೆಂಗಳೂರು:ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡುವುದಕ್ಕೆ ಸಂಕಲ್ಪ ಮಾಡುವ ದೃಷ್ಟಿಯಿಂದ ಜೆಡಿಎಸ್ ಏ. 16ರಂದು ಆರಂಭಿಸಿದ್ದ ‘ಜನತಾ ಜಲಧಾರೆ’ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ನೆಲಮಂಗಲದಲ್ಲಿ ಇಂದು ಯಶಸ್ವಿಯಾಗಿ ನಡೆಯಿತು.
ಈ ಸಮಾರಂಭದಲ್ಲಿ ಭಾಗಿಯಾಗಲು ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಜೆಡಿಎಸ್ ಕಾರ್ಯಕರ್ತರು ನೆಲಮಂಗಲಕ್ಕೆ ಆಗಮಿಸಿದ್ದರಿಂದ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಕೇವಲ ಹಾಸನ ಜಿಲ್ಲೆ ಒಂದರಿಂದಲೇ 547 ಸರ್ಕಾರಿ ಸಾರಿಗೆ ಬಸ್ ಮತ್ತು 600 ಖಾಸಗಿ ವಾಹನಗಳು ಬಂದಿವೆ. ರಾಜ್ಯದ ಇತರ ಭಾಗಗಳಿಂದಲೂ ಸಾವಿರಾರು ಬಸ್-ಟೆಂಪೋಗಳಲ್ಲಿ ಕಾರ್ಯಕರ್ತರು ಬಂದಿದ್ದಾರೆ.

ಸುಮಾರು ಐದು ಲಕ್ಷ ಜನರಿಗೆ ಊಟೋಪಚಾರದ ವ್ಯವಸ್ಥೆಯನ್ನು ಸಮಾರೋಪ ಸಮಾರಂಭದಲ್ಲಿ ಮಾಡಲಾಗಿದ್ದು, ಸುಮಾರು 3 ಸಾವಿರ ಬಾಣಸಿಗರು ಇದರಲ್ಲಿ ತೊಡಗಿಕೊಂಡಿದ್ದಾರೆ. ಊಟ ಬಡಿಸಲು 2 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪಲಾವ್, ಜಿಲೇಬಿ, ಕೇಸರಿಬಾತ್, ಮಜ್ಜಿಗೆಯನ್ನು ಕಾರ್ಯಕರ್ತರಿಗೆ ವಿತರಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
