ಬೆಂಗಳೂರು:ಹಿರಿಯ ನಟ ಅರ್ಜುನ್​ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಮಾಡಿದ ಸಂಗತಿ ನಿಮಗೆಲ್ಲ ಗೊತ್ತೇ ಇದೆ. ಇಷ್ಟು ದಿನ ತಣ್ಣಗಾಗಿದ್ದ ಮೀಟೂ ಆರೋಪ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಪ್ರಕರಣದಲ್ಲಿ ತಾಜಾ ಬೆಳವಣಿಗೆಯೊಂದು ನಡೆದಿದೆ. ಪೊಲೀಸರ ಬಿ-ರಿಪೋರ್ಟ್​ ಪ್ರಶ್ನಿಸಿದ್ದ ಶ್ರುತಿಗೆ ಮತ್ತೊಮ್ಮೆ ನೋಟಿಸ್​ ನೀಡಲಾಗಿದೆ.
ಮೀಟೂ ಆರೋಪಕ್ಕೆ ಅರ್ಜುನ್​ ಸರ್ಜಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಿ ಪೊಲೀಸರು ಬಿ ರಿಪೋರ್ಟ್ ನೀಡಿದ್ದರು. ಇದನ್ನು ಶ್ರುತಿ ಹರಿಹರನ್​ ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಇದೀಗ ಅರ್ಜಿ ವಿಚಾರಣೆಯ ಬಳಿಕ ಶ್ರುತಿಗೆ ಪೊಲೀಸರು ನೋಟಿಸ್​ ನೀಡಿದ್ದು, ಆರೋಪಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ದಲಿತರಿಗೆ ಪ್ರವೇಶವಿಲ್ಲ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಆದಿಪುರುಷ್​ ಚಿತ್ರತಂಡ ಗರಂ!
ನಟ ಅರ್ಜುನ್ ಸರ್ಜಾ ವಿರುದ್ಧ 2018ರಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಶ್ರುತಿ ಹರಿಹರನ್​ ಅವರು ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಈ ಪ್ರಕರಣ ಬಣ್ಣದ ಜಗತ್ತಿನಲ್ಲೇ ಕೋಲಾಹಲವನ್ನೇ ಎಬ್ಬಿಸಿತ್ತು. ಚಿತ್ರವೊಂದರ ಶೂಟಿಂಗ್‌ ವೇಳೆ ಅರ್ಜುನ್‌ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಶೃತಿ ಆರೋಪಿಸಿದ್ದರು. 2015 ರಲ್ಲಿ ನಡೆದಿದ್ದ ‘ವಿಸ್ಮಯ’ ಎಂಬ ಹೆಸರಿನ ಚಿತ್ರದ ಶೂಟಿಂಗ್‌ ವೇಳೆ ರೋಮ್ಯಾಂಟಿಕ್ ಸೀನ್ ರಿಹರ್ಸಲ್ ಸಂದರ್ಭದಲ್ಲಿ ಅರ್ಜುನ್ ಸರ್ಜಾರವರು ನನ್ನ ಖಾಸಗಿ ಅಂಗವನ್ನು ಮುಟ್ಟಿದ್ದರು. ಆಗ ತಾನೆ ನಾನು ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಳ್ಳುತ್ತಿದ್ದ ನಟಿಯಾಗಿದ್ದರಿಂದ ನಾನು ಏನೂ ಮಾಡದೇ ಸುಮ್ಮನಾದೆ. ಪುನಃ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡು ನನ್ನ ಬೆನ್ನಿನ ಹಿಂಭಾಗದಲ್ಲೆಲ್ಲಾ ಕೈಯಾಡಿಸಿ ನಮ್ಮ ಡೈರೆಕ್ಟರ್ ಬಳಿ ದೃಶ್ಯವನ್ನು ಈ ರೀತಿ ಇನ್ನು ಸುಧಾರಣೆ ಮಾಡಿಕೊಳ್ಳಬಹುದಲ್ಲಾ ಎಂದು ಹೇಳಿದ್ದರು. ಇದು ನನಗೆ ತೀವ್ರ ಮುಜುಗರ ಉಂಟು ಮಾಡಿತ್ತು ಎಂದು ಮೂರು ವರ್ಷಗಳ ಬಳಿಕ ಅವರು ತಮಗಾಗಿರುವ ಅನ್ಯಾಯದ ಕುರಿತು ಅರ್ಜುನ್‌ ಸರ್ಜಾ ವಿರುದ್ಧ ಕೇಸ್‌ ದಾಖಲು ಮಾಡಿದ್ದರು.
ಅಷ್ಟೇ ಅಲ್ಲದೇ, ಅರ್ಜುನ್ ಸರ್ಜಾ ನನ್ನನ್ನು ರೂಮ್‌ಗೆ ಕರೆದಿದ್ದರು. ಇದಕ್ಕೆ ನಿರಾಕರಿಸಿದಾಗ ಒಂದು ದಿನ ನೀನೇ ಬರುವಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದೂ ಅವರು ದೂರಿನಲ್ಲಿ ಅನ್ಯಾಯದ ಕುರಿತು ಹೇಳಿಕೊಂಡಿದ್ದರು. ಇದರ ನಂತರ ಹಲವಾರು ನಟಿಯರು ತಮಗಾಗಿರುವ ಕಹಿ ಅನುಭವಗಳನ್ನು ಹೇಳಿಕೊಳ್ಳಲು ಮುಂದೆ ಬಂದಿದ್ದರು. ನಟಿಯರು ಮಾತ್ರವಲ್ಲದೇ ಹಲವು ಕ್ಷೇತ್ರಗಳಲ್ಲಿ ಉದ್ಯೋಗದಲ್ಲಿರುವ ಮಹಿಳೆಯರು ಧೈರ್ಯದಿಂದ ಈ ಬಗ್ಗೆ ಹೇಳಿಕೊಂಡಿದ್ದರಿಂದ ‘ಮೀ ಟೂ’ ಚಳವಳಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿತ್ತು.
ಇದನ್ನೂ ಓದಿ:ಒಡಿಶಾ ರೈಲು ದುರಂತದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ರೈಲ್ವೆ ಬೋರ್ಡ್: ಅಧಿಕಾರಿಗಳಿಗೆ ಮಾರ್ಗಸೂಚಿ
ಶೃತಿ ಹರಿಹರನ್‌ ಮತ್ತು ಅರ್ಜುನ್‌ ಸರ್ಜಾ ಕೇಸ್‌ ದಾಖಲಾಗಿ ವರ್ಷಗಳೇ ಕಳೆದಿವೆ. ಇಲ್ಲಿಯವರೆಗೆ ನಟಿಯ ಆರೋಪಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಘಟನೆಗೆ ಸಂಬಂಧಿಸಿದಂತೆ ತಮಗೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಎಲ್ಲ ರೀತಿಯಲ್ಲಿ ತನಿಖೆ ಮಾಡಿದರೂ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಕುರುಹುಗಳು ಇಲ್ಲ, ಸಾಕ್ಷ್ಯಾಧಾರಗಳೂ ಇಲ್ಲ ಎಂದು ಪೊಲೀಸರು ಕೋರ್ಟ್‌ಗೆ ‘ಬಿ ರಿಪೋರ್ಟ್‌’ ಸಲ್ಲಿಸಿದ್ದರು. ಈ ರಿಪೋರ್ಟ್‌ಗೆ ನಟಿ ಕೂಡ ಆರಂಭದಲ್ಲಿ ಯಾವುದೇ ಆಕ್ಷೇಪ ವ್ಯಕ್ತಪಡಿಸದೇ ಮೌನಕ್ಕೆ ಜಾರಿದ್ದರು. ಇದರ ನಡುವೆ ನ್ಯಾಯಾಲಯದಲ್ಲಿ ಮತ್ತೆ ಬಿ-ರಿಪೋರ್ಟ್​ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಸಾಕ್ಷಿ ನೀಡುವಂತೆ ಶ್ರುತಿಗೆ ನೋಟಿಸ್​ ನೀಡಲಾಗಿದೆ.(ದಿಗ್ವಿಜಯ ನ್ಯೂಸ್​)
ಜೂ. 11ರಂದು ಶಕ್ತಿ ಯೋಜನೆಗೆ ಚಾಲನೆ: ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಪ್ರತಿ ಲಾರಿಯಿಂದ 300 ರೂ. ವಸೂಲಿ: ASI ಸೇರಿ ಇಬ್ಬರು ಪೊಲೀಸರಿಗೆ ಶಾಕ್​ ಕೊಟ್ಟ ತುಮಕೂರು ಎಸ್ಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 8 =
Remember me
