ಗದಗ:ಮತದಾನಕ್ಕೆ ಬಂದ ಮಹಿಳೆಗೆ ಲಾಠಿಯಿಂದ ಹೊಡೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ ಸಂಖ್ಯೆ 216ರಲ್ಲಿ ನಡೆದಿದೆ. ಘಟನೆಯಿಂದ ಮತದಾನ ಸ್ಥಗಿತ ಮಾಡಿದ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಪತ್ನಿಯೊಂದಿಗೆ ಹೆಲಿಕಾಪ್ಟರ್​ನಲ್ಲಿ ಬಂದು ಮತ ಚಲಾಯಿಸಿದ ಮಾಜಿ ಪ್ರಧಾನಿ
ಹುಲಗೇಮ್ಮ ಎಂಬ ಮಹಿಳೆಯ ಕೈಗೆ ಲಾಠಿಯಿಂದ ಹೊಡೆದಿರುವ ಆರೋಪ, ಸಿಪಿಐ ಸದಲಗಿ ಹಾಗೂ ಗ್ರಾಮಸ್ಥರು ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆ ನಡೆಯುತ್ತಿದ್ದಂತೆ ಲಾಠಿಯಿಂದ ಹೊಡೆದಿರುವ ಸಿಬ್ಬಂದಿ ಮೇಲೆ ಕ್ರಮ ಜರುಗಿಸುವಂತೆ ಜನರು ಒತ್ತಾಯಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಮತ ಚಲಾಯಿಸಿದ ಮಾಜಿ ಸಿಎಂ; ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ
ಘಟನೆ ತಿಳಿದು ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ ಕೂಡಲೇ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ. ಮತಗಟ್ಟೆಯಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಜನರು ಮತದಾನಕ್ಕೆ ಬಂದಾಗ ಘಟನೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ತಹಶೀಲ್ದಾರ್ ಭರವಸೆ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 − three =
Remember me
