ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದ್ದು, 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ಸರ್ಕಾರ ಡಿಸೆಂಬರ್​ 21ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಆದರೆ, ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಿ ಡಿಸೆಂಬರ್​ 26ಕ್ಕೆ ನಿಗದಿಪಡಿಸಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ…pic.twitter.com/0CW7OgkiMa
ಇದನ್ನೂ ಓದಿ:ಈಗ ನೀವು ರಸ್ತೆಯ ಬದಲಿಗೆ ಪರ್ಮಿಟ್ ರೂಮ್‌ನಲ್ಲಿ ಬಿಯರ್ ಕುಡಿಯಬಹುದು; ಯುಪಿಯಲ್ಲಿ ಹೊಸ ರೂಲ್ಸ್​
ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ 3000 ರೂ. ನಿಗದಿ ಮಾಡಿದ್ದರೆ, ಡಿಪ್ಲೊಮ ಪಾಸ್ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ಸಿಗಲಿದೆ. ಕರ್ನಾಟಕ ಸರ್ಕಾರದ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ನಿರುದ್ಯೋಗಿ ಯುವಕರಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಯು 2 ವರ್ಷಗಳ ನಂತರ ಅಥವಾ 2 ವರ್ಷಗಳ ಅವಧಿಯಲ್ಲಿ ಉದ್ಯೋಗವನ್ನು ಕಂಡುಕೊಂಡರೆ ನಿರುದ್ಯೋಗ ಭತ್ಯೆಯನ್ನು ತಕ್ಷಣವೇ ನಿಲ್ಲಿಸಲಾಗುತ್ತದೆ.
ಯುವನಿಧಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿ ಕರ್ನಾಟಕದವರಾಗಿರಬೇಕು. ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eight =
Remember me
