ಬೆಂಗಳೂರು:ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ 4 ಎಕರೆ ಜಾಗ ನೀಡುವ ಸಂಬಂಧ ಪರಿಶೀಲನೆ ನಡೆಸಿ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆಯು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದೆ.
ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ತನ್ನ ಪ್ರಾದೇಶಿಕ ಕಚೇರಿ ಸ್ಥಾಪನೆಗೆ 4 ಎಕರೆ ಜಮೀನು ಮಂಜೂರು ಮಾಡುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿಕಾರಿಗಳು ಉನ್ನತ ಶಿಕ್ಷಣ ಇಲಾಖೆಗೆ ಕಳೆದ ಫೆಬ್ರವರಿಯಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ನನ್ನನ್ನು ಸೋಲಿಸಬೇಕೆಂದೇ ಬಿಜೆಪಿ-ಕಾಂಗ್ರೆಸ್​ ಒಂದಾಗಿದೆ: ನಿಖಿಲ್​ ಕುಮಾರಸ್ವಾಮಿ
ಈ ಮನವಿ ಉಲ್ಲೇಖಿಸಿ ಬೆಂಗಳೂರು ವಿವಿ ಕುಲಸಚಿವರಿಗೆ ಪತ್ರ ಬರೆದಿರುವ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಾದೇಶಿಕ ಕೇಂದ್ರಕ್ಕೆ ವಿವಿಯ ಭೂಮಿ ನೀಡುವ ಸಂಬಂಧ ನಿಯಮಾನುಸಾರ ಪರಿಶೀಲನೆ ನಡೆಸಿ ಅಭಿಪ್ರಾಯದೊಂದಿಗೆ ವರದಿ ಸಲ್ಲಿಸಲು ಪತ್ರದಲ್ಲಿ ಸೂಚಿಸಿದ್ದಾರೆ.
ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಕಾನೂನು ಶಾಲೆ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿ, ನ್ಯಾಕ್, ಐಸೆಕ್, ಕೆಂಪೇಗೌಡ ಅಧ್ಯಯನ ಕೇಂದ್ರ, ಪೊಲೀಸ್ ಠಾಣೆ, ಯುಜಿಸಿ ಸೇರಿ ಅನೇಕ ಸಂಸ್ಥೆಗಳಿಗೆ ನೂರಾರು ಎಕರೆ ಜಮೀನು ನೀಡಿದೆ. ಇದೀಗ ಇನ್ನೂ 4 ನಾಲ್ಕು ಎಕರೆ ನೀಡಲು ಮನವಿ ಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 5 =
Remember me
