ಬೆಳಗಾವಿ:ಬಿಜೆಪಿಯಿಂದ ಟಿಕೆಟ್​ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್​ ಸದಸ್ಯ ಲಕ್ಷ್ಮಣ್​ ಸವದಿ ಕಾಂಗ್ರೆಸ್​ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಸೊಸೆಯ ಅಶ್ಲೀಲ ಚಾಟಿಂಗ್​: ಮಲಗಿದ್ದಲ್ಲೇ ಶವವಾದ ಅತ್ತೆ-ಮಾವನ ಸಾವಿನ ಹಿಂದಿನ ಭಯಾನಕತೆ ಬಯಲು

ಸದ್ಯ ಬೆಳಗಾವಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಿಂದ ಲಕ್ಷ್ಮಣ ಸವದಿ ಹೊರಟಿದ್ದಾರೆ. ಗಮನಾರ್ಹ ಸಂಗತಿ ಏನೆಂದರೆ, ಲಕ್ಷ್ಮಣ್​​ ಸವದಿಗೆ ಕಾಂಗ್ರೆಸ್​ ಎಂಎಲ್​ಸಿ ಚನ್ನರಾಜ್ ಹಟ್ಟಿಹೊಳಿ ಸಾಥ್ ನೀಡಿದ್ದಾರೆ. ಹಟ್ಟಿಹೊಳಿ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಬುಕ್‌ ಆಗಿರುವ ವಿಶೇಷ ವಿಮಾನದಲ್ಲಿ ಸವದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದ್ದು, ರಮೇಶ್​ ಜಾರಕಿಹೊಳಿ‌ ವಿರುದ್ಧ ಡಿಕೆಶಿ ಹೊಸ ದಾಳ ಉರುಳಿಸಿದ್ದಾರೆ.
ಇದನ್ನೂ ಓದಿ:ಲಂಕಾದಿಂದ ಚೀನಾಕ್ಕೆ 1 ಲಕ್ಷ ಮಂಗಗಳ ರಫ್ತು? ಸಾಲ ತೀರಿಸಲು ಹೊಸ ಮಾರ್ಗೋಪಾಯ ಕಂಡುಕೊಳ್ಳುತ್ತಿರುವ ದ್ವೀಪರಾಷ್ಟ್ರ

ಅಥಣಿ ಕ್ಷೇತ್ರದಿಂದ ಸವದಿಗೆ ಟಿಕೆಟ್​ ನಿರಾಕರಿಸಿ, ರಮೇಶ್​ ಜಾರಕಿಹೊಳಿ ಆಪ್ತ ಮಹೇಶ್​ ಕುಮಟಹಳ್ಳಿಗೆ ನೀಡಲಾಗಿದೆ. ಇದು ಸವದಿ ಆಕ್ರೋಶಕ್ಕೆ ಕಾರಣವಾಗಿದ್ದು, ನೇರವಾಗಿಯೇ ಪಕ್ಷದ ವಿರುದ್ಧ ಸವದಿ ಆಕ್ರೋಶ ಹೊರಹಾಕಿದ್ದಾರೆ. ಇಂದು ತಮ್ಮ ಪರಿಷತ್​ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.(ದಿಗ್ವಿಜಯ ನ್ಯೂಸ್​)
ವರುಣಾದಲ್ಲಿ‌ ಸೋಮಣ್ಣರಿಗೆ ನೂರೆಂಟು ಸವಾಲು! ಬಿ.ಎಸ್. ಯಡಿಯೂರಪ್ಪರ ಮೇಲೆ ಸದ್ಯದ ಕುತೂಹಲ

ಬಿಜೆಪಿಗೆ ಮತ ಹಾಕದಂತೆ ಆಣೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು ದಾಖಲು!

ಭಾರತ ವಿರೋಧಿ ಚಟುವಟಿಕೆ ವಿರುದ್ಧ ಕ್ರಮ: ರಿಷಿ ಸುನಕ್​ ಜತೆ ಪ್ರಧಾನಿ ಮೋದಿ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − four =
Remember me
