ಬೆಂಗಳೂರು:ರಾಜ್ಯದ ಅರಣ್ಯ ಪ್ರದೇಶದೊಳಗೆ ವಾಹನಗಳು ಸಾಗುವಾಗ ಯಾವುದೇ ಪ್ರಯಾಣಿಕರು ವಾಹನದಿಂದ ಇಳಿಯುವಂತಿಲ್ಲ. ಇದು ವನ್ಯಜೀವಿ ಸಂರಕ್ಷಣಾ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗಿದೆ.
ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾಹನವೊಂದರಿಂದ ಕೆಲವು ಪ್ರಯಾಣಿಕರು ಇಳಿದು ಮತ್ತೊಂದು ವಾಹನದ ಪ್ರಯಾಣಿಕರಿಗೆ ಅವಾಚ್ಯ ಶಬ್ದದಿಂದ ಬೈದು, ಗಲಾಟೆ ಮಾಡಿರುವುದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ. ಬಂಡೀಪುರ ಅರಣ್ಯ ಪ್ರದೇಶದೊಳಗೆ ಹಾದು ಹೋಗುವ ರಸ್ತೆಯಲ್ಲಿ ಪ್ರಯಾಣಿಕರು ಇಳಿದಿದ್ದರೂ ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲ ಎಂಬುದು ಅರಣ್ಯ ಸಚಿವರ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಒಂದೊಮ್ಮೆ ವಾಹನದಿಂದ ಪ್ರಯಾಣಿಕರು ಅರಣ್ಯ ಪ್ರದೇಶದೊಳಗೆ ಇಳಿದಿದ್ದರೆ ಕಾನೂನು ಕ್ರಮ ಜರುಗಿಸಲು ಬಂಡೀಪುರ ವಿಭಾಗದ ಅರಣ್ಯಾಧಿಕಾರಿಗಳಿಗೆ ಅರಣ್ಯ ಸಚಿವರು ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − ten =
Remember me
