ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಎಲ್ಲ ಇಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್​ ಕಾಲೇಜು ಮತ್ತು ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿಗೂ ಏ.14ರವರೆಗೆ ರಜೆ ಮುಂದುವರಿಸಲಾಗಿದೆ.
ಈ ಮೊದಲು ಮಾರ್ಚ್​ 31ರವರೆಗೆ ರಜೆ ನೀಡಿ ಆದೇಶ ಹೊರಡಿಸಲಾಗಿತ್ತು. ಆದರೆ, ಕರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವುದರಿಂದ ದೇಶಾದ್ಯಂತ ಏಪ್ರಿಲ್​ 14ರವರೆಗೆ ಲಾಕ್​ಡೌನ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ಅಧೀನದ ಶಿಕ್ಷಣ ಸಂಸ್ಥೆಗಳಿಗೂ ರಜೆವಿಸ್ತರಿಸಲಾಗಿದೆ ಎಂದು ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಕೂಡ ಏಪ್ರಿಲ್​ 11ರವರೆಗೆ ರಜೆ ಘೋಷಿಸಿದ್ದು, ಏಪ್ರಿಲ್​ 11ರ ನಂತರ ಬೇಸಿಗೆ ರಜೆ ಮುಂದುವರಿಯಲಿದೆ ಎಂದು ತಿಳಿಸಿದೆ. ಆದರೆ, ಶಿಕ್ಷಕರು ಕೇಂದ್ರ ಸ್ಥಾನ ಬಿಟ್ಟು ತೆರಳದಂತೆ ಸೂಚಿಸಿದೆ.
ರಜೆಯಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಮಾಡಬೇಕಾದುದೇನು?ಲಾಕ್​ಡೌನ್​ ಹಿನ್ನೆಲೆಯಲ್ಲಿ ನೀಡಲಾಗಿರುವ ರಜೆಯಲ್ಲಿ ಕೆಲ ಕಾರ್ಯಗಳನ್ನು ನಿರ್ವಹಿಸುವಂತೆ ಇಲಾಖೆ ಈ ಹಿಂದಯೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್​ಲೈನ್​ ಬೋಧನೆಗೆ ಅಗತ್ಯ ಸಾಮಗ್ರಿ ಸಿದ್ಧಪಡಿಸುವುದು, ವಿದ್ಯಾರ್ಥಿಗಳಿಗೆ ಆನ್​ಲೈನ್​ ಬೋಧನೆ ಹಾಗೂ ಕಲಿಕೆಗೆ ನೆರವಾಗುವುದು, ಎಲ್ಲಕ್ಕೂ ಮುಖ್ಯವಾಗಿ ಕರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುರ್ತು ಕಾರ್ಯಗಳು ಎದುರಾದರೆ ಸಿದ್ಧವಾಗಿರುವಂತೆ ತಿಳಿಸಿದೆ. ಇದಕ್ಕಾಗಿ ಸಂಸ್ಥೆಯಲ್ಲಿ ಒಬ್ಬರನ್ನು ಕರೊನಾ ಸಮನ್ವಯ ಅಧಿಕಾರಿಯಾಗಿ ನೇಮಿಸುವಂತೆ ಸೂಚಿಸಿದೆ.
ಶಾಲೆಗಳಲ್ಲಿ ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ: ಸುತ್ತೋಲೆ ಹೊರಡಿಸಿತು ಸಾರ್ವಜನಿಕ ಶಿಕ್ಷಣ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 6 =
Remember me
