ಮಂಡ್ಯ:ಪ್ರಾಂಶುಪಾಲರ ಉಪಟಳ ಸಹಿಸಲಾರದೆ ತಮ್ಮನ್ನು ಪಾರು ಮಾಡಿ ಎಂದು ಉಪನ್ಯಾಸಕರೊಬ್ಬರು ಶಾಸಕರ ಕಾಲಿಗೆ ಬಿದ್ದು ಬೇಡಿಕೊಂಡ ಘಟನೆಯೊಂದು ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಇಲ್ಲಿನ ಉಪನ್ಯಾಸಕ ವಿ.ಕೆ. ಶಿವಾನಂದ ಎಂಬವರು ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ಅವರ ಕಾಲಿಗೆ ಬಿದ್ದಿದ್ದಾರೆ. ಶಾಸಕರು ಕಾಲೇಜಿಗೆ ಭೇಟಿಕೊಟ್ಟ ಸಂದರ್ಭದಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಕಾಲೇಜಿನ ಪ್ರಾಂಶುಪಾಲ ಪಾಪಯ್ಯ ಅವರು ಜಾತೀಯತೆ ತೋರುತ್ತಿದ್ದಾರೆ. ಚಿಕ್ಕಪುಟ್ಟ ವಿಷಯಗಳಿಗೂ ಅಟ್ರಾಸಿಟಿ ಕೇಸು ದಾಖಲಿಸುತ್ತಿದ್ದಾರೆ. ನಾವು ಪೊಲೀಸ್ ಠಾಣೆಗೆ ಅಲೆದು ಸುಸ್ತಾಗಿದ್ದೇವೆ, ಇದರಿಂದ ನಮ್ಮನ್ನು ಹೇಗಾದರೂ ಪಾರು ಮಾಡಿ ಎಂದು ಶಾಸಕರ ಕಾಲಿಗೆ ಬಿದ್ದು ಉಪನ್ಯಾಸಕರು ಬೇಡಿಕೊಂಡಿದ್ದಾರೆ.
ಉಪನ್ಯಾಸಕರನ್ನು ಸಂತೈಸಿದ ಶಾಸಕ ಡಿ.ಸಿ.ತಮ್ಮಣ್ಣ, ಶಿಕ್ಷಣಕ್ಕೆ ತೊಂದರೆ ಕೊಡುವವರನ್ನು ಹೊರಗೆ ಹಾಕುತ್ತೇನೆ. ಅವರಿಂದ ನನಗೇನೂ ಲಕ್ಷಾಂತರ ವೋಟು ಬರಬೇಕಾಗಿಲ್ಲ. ನನಗೆ ಅಧಿಕಾರ ಮುಖ್ಯವಲ್ಲ. ಸಂಸ್ಥೆಗೆ ತೊಂದರೆ ಕೊಡುವವರನ್ನು ಹೊರಗೆ ಕಳುಹಿಸುತ್ತೇನೆ ಎಂದರು. ಅಲ್ಲದೆ ಸಮಸ್ಯೆ ಸರಿಯಾಗಿ ಹೇಳಬೇಕಲ್ವಾ ಎಂದು ಉಪನ್ಯಾಸಕರಿಗೆ ಶಾಸಕರು ಸಾಂತ್ವನ ಹೇಳಿದರು.
ಮತ್ತೆ ಎದುರಾಯ್ತು ಹಬ್ಬಗಳಿಗೂ ನಿರ್ಬಂಧ; ಮನೆ-ದೇವಸ್ಥಾನಗಳ ಒಳಗಷ್ಟೇ ಹಬ್ಬ ಆಚರಿಸಿ ಎಂದು ಆದೇಶಿಸಿದ ಸರ್ಕಾರ

ಭಾರತದಲ್ಲಿ ಪ್ರತಿನಿತ್ಯ 1,157 ಮಹಿಳೆಯರು ನಾಪತ್ತೆ!; ದೇಶದಲ್ಲಿ ಹೆಚ್ಚಾಗಿದೆ ಸ್ತ್ರೀಯರ ಮಿಸ್ಸಿಂಗ್​ ಕೇಸ್​..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seven =
Remember me
