ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನದ ಸುದ್ದಿ ಮಾಸುವ ಮುನ್ನವೇ ಮತ್ತೊಂದು ಕಹಿ ವಿಚಾರ ಕೇಳಿ ಬಂದಿದೆ. ಲೀಲಾವತಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆ ಬಂಗಾರಮ್ಮ ಇಹಲೋಕ ತ್ಯಜಿಸಿದ್ದಾರೆ.
ಕ್ಯಾನ್ಸರ್​ನಿಂದ ಬಳಲುತ್ತಿದ್ದ ಬಂಗಾರಮ್ಮ ಅವರಿಗೆ 65 ವರ್ಷ ವಯಸ್ಸಾಗಿತ್ತು ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ಸಂಸತ್ತನ್ನೇ ಕಾಯಲಾಗದ ಚೌಕಿದಾರನಿಗೆ ದೇಶ ಕಾಯಲು ಸಾಧ್ಯವೇ: ರಾಜ್ಯ ಕಾಂಗ್ರೆಸ್
ಬಂಗಾರಮ್ಮನವರು ಚಿಕ್ಕವಯಸ್ಸಿನಿಂದಲೂ ಲೀಲಾವತಿ ಅವರ ಜೊತೆಗೆ ಇರುತ್ತಿದ್ದರು, ಲೀಲಾವತಿ ಚೆನ್ನೈನಲ್ಲಿ ವಾಸವಾಗಿದ್ದಾಗಲೂ, ಅವರೊಂದಿಗೆ ಬಂಗಾರಮ್ಮ ಇದ್ದರು. ಲೀಲಾವತಿ ಎಲ್ಲಿಗೇ ಹೋದರೂ, ಬಂಗಾರಮ್ಮ ಜೊತೆಗೆ ಬರುತ್ತಿದ್ದರು. ಇದೀಗ ಲೀಲಾವತಿ ಇನ್ನಿಲ್ಲವಾದ ಬೆನ್ನಲ್ಲೇ ಬಂಗಾರಮ್ಮ ಕೂಡ ಚಿರನಿದ್ರೆಗೆ ಜಾರಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಂಗಾರಮ್ಮ ಅವರಿಗಾಗಿಯೇ ಓರ್ವ ನರ್ಸ್ ನೇಮಿಸಿ ವಿನೋದ್ ರಾಜ್ ಆರೈಕೆ ಮಾಡುತ್ತಿದ್ದರು. ಬಂಗಾರಮ್ಮ ಅವರನ್ನ ವಿನೋದ್‌ ರಾಜ್ ಅವರೇ ನೋಡಿಕೊಳ್ಳುತ್ತಿದ್ದರು. ಡಿಸೆಂಬರ್ 12ರ ರಾತ್ರಿ ನಾಗರಬಾವಿ ಬಳಿಯ ಆಸ್ಪತ್ರೆಯಲ್ಲಿ ಬಂಗಾರಮ್ಮ ಅಸುನೀಗಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × one =
Remember me
