ಬೆಂಗಳೂರು :ಹೆಣ್ಣುಮಕ್ಕಳ ಒಳಉಡುಪಿನ ಮೇಲೆ ಕನ್ನಡದ ಬಾವುಟದ ಬಣ್ಣಗಳನ್ನು ಹಾಗೂ ಕರ್ನಾಟಕದ ರಾಜ್ಯ ಲಾಂಛನವನ್ನು ಬಳಸಿರುವ ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಕನ್ನಡದ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಕನ್ನಡ ನೆಲದ ಶ್ರೇಷ್ಠತೆಯ ಅರಿವಿಲ್ಲದ ವಿದೇಶಿ ಸಂಸ್ಥೆಗಳು ಕನ್ನಡದ ಅಸ್ಮಿತೆಗೆ ಅವಮಾನ ಮಾಡುವಂತಹ ಯಾವುದೇ ಕೆಲಸ ಮಾಡಿದರೂ ಅದನ್ನು ನಾನು ಪ್ರಬಲವಾಗಿ ಖಂಡಿಸುತ್ತೇನೆ. ಕನ್ನಡಿಗರ ಭಾವನೆಗೆ ಧಕ್ಕೆ ಮಾಡುವಂತಹ ಯಾವುದೇ ಕ್ರಮಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಲಿಂಬಾವಳಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿ ನಾನು ಇಂತಹ ಕೃತ್ಯದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅವಶ್ಯವೆಂದು ಭಾವಿಸಿ, ಅಮೆಜಾನ್ ಕೆನಡಾ ಸಂಸ್ಥೆಯ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲು ಸೂಚಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 7 =
Remember me
