ಮಂಡ್ಯ:ಕೋವಿಡ್ ಮುಕ್ತ ಸ್ವಾಸ್ತ ಸಮಾಜವನ್ನು ನಿರ್ಮಿಸಬೇಕೆಂಬ ಉದ್ದೇಶದೊಂದಿಗೆ ನ್ಯಾಯಾಂಗ ಇಲಾಖೆಯಿಂದ ಜಿಲ್ಲೆಯಲ್ಲಿ ಜನಾಂದೋಲನ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಹೇಳಿದರು.ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ವಕೀಲರ ಸಂಘದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಕೋವಿಡ್-19 ಜನಜಾಗೃತಿ ಮತ್ತು ಭ್ರಷ್ಟಾಚಾರ ಕುರಿತು ಅರಿವು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.ಪ್ರತಿಯೊಬ್ಬರು ತಪ್ಪದೇ ಮಾಸ್ಕ್ ಧರಿಸಬೇಕು. ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಆಗಾಗ್ಗೆ ಸ್ಯಾನಿಟೈಸರ್ ಬಳಕೆ ಮಾಡಿಕೊಳ್ಳಬೇಕು. ಈ ಬಗ್ಗೆ ಜಿಲ್ಲೆಯ ಬಸ್ ನಿಲ್ದಾಣ, ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳು ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು. ಡಿಸಿ ಡಾ.ಎಂ.ವಿ.ವೆಂಕಟೇಶ್, ಜಿಪಂ ಸಿಇಒ ಎಸ್.ಎಂ.ಜುಲ್‌ಫಿಖಾರ್ ಉಲ್ಲಾ ಇತರರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × three =
Remember me
