ಬೆಂಗಳೂರು:ಸುಳ್ಳಿಗೆ ಪುಷ್ಟಿ ಕೊಡಲು ಭಯೋತ್ಪಾದಕರು, ಉಗ್ರರಿಗೆ ಸರ್ಟಿಫಿಕೇಟ್ ಕೊಡುವ ಕಾಂಗ್ರೆಸ್ಸಿನ ಬಸ್ ಯಾತ್ರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿ ಕುಮಾರ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಅವರು ಭಯೋತ್ಪಾದಕರೇ ಅಲ್ಲ, ಉಗ್ರರಲ್ಲ. ಅದೇನೋ ಆಟೋದಲ್ಲಿ ಹೋಗುವಾಗ ಆಕಸ್ಮಿಕವಾಗಿ ಸ್ಫೋಟ ಆಗಿದೆ. ಅವರೆಲ್ಲ ಅಮಾಯಕರು. ಅವರನ್ನು ಭಯೋತ್ಪಾದಕರೆಂದು ಬಿಂಬಿಸುತ್ತಿದ್ದೀರಿ ಎಂದಿದ್ದರು. ಈಗ ತನಿಖೆಯಲ್ಲಿ ಎಲ್ಲ ಬಹಿರಂಗ ಆಗುತ್ತಿದೆ ಎಂದರು.
ಕಾಂಗ್ರೆಸ್ ಬಸ್ ಯಾತ್ರೆಯಲ್ಲಿ ಶೇ.40 ಕಮಿಷನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕುರಿತು ಪ್ರಧಾನಿಯವರಿಗೂ ಪತ್ರ ಬರೆದಿದ್ದಾರೆ. ಕೆಂಪಣ್ಣನವರು ಕೋರ್ಟಿನಲ್ಲಿ ದಾಖಲೆ ಕೊಡುವುದಾಗಿ ಹೇಳಿದ್ದರು. ಆದರೆ, ಯಾವುದೇ ಕೋರ್ಟಿಗೆ ದಾಖಲೆ ನೀಡಿಲ್ಲ ಎಂದರಲ್ಲದೆ, ಯಾವುದನ್ನು ಸಲ್ಲಿಸಿದ್ದಾರೆ ಸ್ವಾಮಿ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದರು. ಬಿಜೆಪಿಯನ್ನು ಬ್ರ್ಯಾಂಡ್ ಮಾಡಲು ಷಡ್ಯಂತ್ರ ಮತ್ತು ಸಂಚು ಈ ಆರೋಪದ ಹಿಂದಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಅವರ ಬ್ಲ್ಯಾಕ್‌ಮೇಲ್ ತಂತ್ರ ಜನಕ್ಕೆ ಗೊತ್ತಾಗಿದೆ. ಕೆಂಪಣ್ಣ ಬಂಧನವಾಗಿ ಬಳಿಕ ಬಿಡುಗಡೆಗೊಂಡಿದ್ದಾರೆ. ಅವರಲ್ಲಿ ದಾಖಲೆಗಳಿದ್ದರೆ ತಾನೇ ಅದನ್ನು ಕೊಡುವುದು. ಈ ಇಬ್ಬರು ನಾಯಕರು ಖಾಲಿ ಡಬ್ಬ ಶಬ್ದ ಮಾಡಿದಂತೆ ಸುಮ್ಮನೆ ಸದ್ದು ಮಾಡುತ್ತಿದ್ದಾರೆ. ಅವರ ಬಳಿ ಯಾವುದೇ ದಾಖಲಾತಿಗಳಿಲ್ಲ ಎಂದು ಆರೋಪಿಸಿದರು.
ಲವ್ ಜಿಹಾದ್ ಮಾಡುವವರು, ಹಿಜಾಬ್ ಮಾಡುವವರು, ಕುಕ್ಕರ್ ಬ್ಲಾಸ್ಟ್ ಮಾಡುವವರಿಗೆ ಸರ್ಟಿಫಿಕೇಟ್ ಕೊಡುವ ಹಾಗೂ 175 ಕೇಸು ರದ್ದು ಮಾಡಿ ಉಗ್ರವಾದಿಗಳಿಗೆ ಬೆಂಬಲ ಕೊಡುವವರಿಗೆ, ರೌಡಿಸಂಗೆ ಬೆಂಬಲ ನೀಡುವ 1600 ಜನರನ್ನು ಬಿಡುಗಡೆ ಮಾಡಿದ ಸಿದ್ದರಾಮಯ್ಯ ಈಗ ಹುಸಿ ಭಾಷಣಗಳು, ಸುಳ್ಳು ಭರವಸೆಗಳ ಬಸ್ ಯಾತ್ರೆ ಆರಂಭಿಸಿದ್ದಾರೆ ಎಂದರು.
ಎಸ್.ಸಿ.ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಶೇ.40 ಎಂಬುದು ಕಾಂಗ್ರೆಸ್‌ನ ಟೂಲ್ಕಿಟ್. ಅವರ ಮಾತಿನಲ್ಲಿ ಹುರುಳಿಲ್ಲ. ಶೇ.40 ಸರ್ಕಾರ ನಮ್ಮದಲ್ಲ. 2016-18ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅದಕ್ಕಿಂತ ಹೆಚ್ಚು ಕಮಿಷನ್ ಇತ್ತು. 115 ಕೋಟಿ ಮೊತ್ತದ ಟೆಂಡರ್ ಶೂರ್ ಕಾಮಗಾರಿಯಲ್ಲಿ 53.86 ಶೇಕಡಾ ಕಮಿಷನ್ ಇತ್ತು. ಅದರ ದಾಖಲೆಗಳು ನಮ್ಮಲ್ಲಿವೆ ಎಂದು ತಿಳಿಸಿದರು.
86.46 ಕೋಟಿಯ ಇನ್ನೊಂದು ಕಾಮಗಾರಿಯಲ್ಲಿ ಶೇ.48 ಎಸ್ಕಲೇಷನ್ ಮಾಡಿದ್ದಾರೆ. ಇನ್ನೊಂದು ಕಾಮಗಾರಿಯಲ್ಲಿ 36.6 ಹೆಚ್ಚಳ ಮಾಡಿದ್ದಾರೆ. ಕಾಂಗ್ರೆಸ್‌ನದು ಶೇ.54 ಸರ್ಕಾರ. ಅದಕ್ಕಾಗಿಯೇ ಅವರನ್ನು ಜನರು ತಿರಸ್ಕರಿಸಿದರು ಎಂದರು. ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
