ಮೈಸೂರು:ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಎಂಬ ಖ್ಯಾತಿಗೆ ಪಾತ್ರವಾಗಿರುವಬಲರಾಮ(67) ಆನೆಯೂ ನಿಧನವಾಗಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮನ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಇಹಲೋಕ ತ್ಯಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಲರಾಮನ ಗಂಟಲಲ್ಲಿ ಹುಣ್ಣಾಗಿದ್ದ ಕಾರಣ ಕಳೆದ ಏಳು ದಿನಗಳಿಂದ ಏನನ್ನು ಸೇವಿಸದೆ ಆನೆ ನಿತ್ರಾಣಗೊಂಡಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ:ವಿವಾದದ ಬಿರುಗಾಳಿ; ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆಗೆ ತಡೆ!
ಪಶು ವೈದ್ಯರ ಸೂಚನೆ ಮೇರೆಗೆ ಎಂಡೋಸ್ಕೋಪಿ ಮೂಲಕ ಆಹಾರ ನೀಡಲು ಮುಂದಾಗಿತ್ತು ಮತ್ತು ದ್ರವ ಪದಾರ್ಥಗಳನ್ನು ಹೆಚ್ಚಾಗಿ ನೀಡಲಾಗುತ್ತಿತ್ತು ಎಂದು ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಪಶು ವೈದ್ಯರು ಹಾಗೂ ಅರಣ್ಯ ಅಧಿಕಾರಿಗಳು ಬಲರಾಮನನ್ನು ಉಳಿಸಿಕೊಳ್ಳಲು ಸತತವಾಗಿ ಪ್ರಯತ್ನಪಟ್ಟರು ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದೆ.
ಕ್ಷಯರೋಗ(TB) ಇಂದ ಬಲರಾಮ ಬಳಲುತ್ತಿದ್ದ ಎಂದು ಶಂಕಿಸಿರುವ ಅಧಿಕಾರಿಗಳು ಆನೆಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 3 =
Remember me
