ಮಳವಳ್ಳಿ:ತಾಲೂಕಿನ ಹಂಗ್ರಾಪುರ ಗ್ರಾಮದ ಜಮೀನೊಂದರಲ್ಲಿ ಗುರುವಾರ ಕಬ್ಬು ಕಟಾವು ಮಾಡುತ್ತಿದ್ದಾಗ ಎರಡು ಚಿರತೆ ಮರಿಗಳು ಪತ್ತೆಯಾಗಿದ್ದು, ಕಾರ್ಮಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿ ಶಿವರಾಜು ಹಾಗೂ ಸಿಬ್ಬಂದಿ, ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾಯಿ ಚಿರತೆ ಸುತ್ತಲಿನ ಪ್ರದೇಶದಲ್ಲೇ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹಲವು ತಿಂಗಳಿನಿಂದ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದುಹಾಕಿದೆ. ಹಲವು ಬಾರಿ ಅರಣ್ಯಾಧಿಕಾರಿ ಗಮನಕ್ಕೆ ತಂದಿದ್ದರೂ ಇತ್ತ ತಲೆ ಹಾಕಿರಲಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಚಿರತೆ ಮರಿಗಳು ಪತ್ತೆಯಾಗಿರುವುದರಿಂದ ರೈತರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − four =
Remember me
