ತುಮಕೂರು:ಕೆಲವು ದಿನಗಳಿಂದ ಈಚೆಗೆ ಬೆಂಗಳೂರು ಹಾಗು ಆಸುಪಾಸಿನ ಪ್ರದೇಶದಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಗಾಬರಿಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಬನ್ನೇರುಘಟ್ಟ ಸಮೀಪದ ಭೂತಾನಹಳ್ಳಿಯ ಮನೆಯೊಂದರ ಬಳಿ ಚಿರತೆ ಕಾಣಿಸಿಗೊಂಡಿದ್ದು ಗ್ರಾಮಸ್ಥರನ್ನ ಭಯಭೀತರನ್ನಾಗಿ ಮಾಡಿತ್ತು. ಈಗ ವಿದ್ಯುತ್ ಸ್ಪರ್ಶಿಸಿ ಚಿರತೆಯೊಂದು ಸಾವಿಗೀಡಾಗಿದೆ.

ಈಗ ಚಿರತೆ ಒಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕರೇಗೌಡನಹಳ್ಳಿ ಗ್ರಾಮದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಈ ಚಿರತೆ ಮರದಿಂದ ಮರಕ್ಕೆ ಹಾರುವಾಗ ಆಯತಪ್ಪಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ.ಈ ಚಿರತೆ ಮತ್ತೊಂದು ಮರಕ್ಕೆ ಹಾರುಚವಾಗ ನೇರವಾಗಿ ವಿದ್ಯುತ್ ಟ್ರಾನ್ಸ್​ಫಾರ್ಮರ್​ ಮೇಲೆ ಬಿದ್ದುದರಿಂದ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದೆ.
ಸದ್ಯ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಗುಬ್ಬಿ ತಾಲೂಕಿನ ಸಿಎಸ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − six =
Remember me
