ವಿಜಯನಗರ:ಸರ್ಕಾರದಿಂದ ಆಯೋಜಿಸಲಾದ ಹಂಪಿ ಉತ್ಸವಕ್ಕೆ ಇಂದು ನಿರೀಕ್ಷಿತ ಸಂಖ್ಯೆಯಲ್ಲಿ ಜನರು ಬರದೆ ಕುರ್ಚಿಗಳು ಖಾಲಿ ಉಳಿದಿದ್ದರಿಂದ ಜಿಲ್ಲಾಧಿಕಾರಿಯನ್ನು ಸಚಿವ ಆನಂದ ಸಿಂಗ್ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ​
ಹಂಪಿ ಉತ್ಸವದ ವೇದಿಕೆಯಲ್ಲೇ ಗರಂ ಆದ ಸಚಿವ ಆನಂದ ಸಿಂಗ್ ಅವರು ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಅವರಿಗೆ ಕ್ಲಾಸ್ ತೆಗೆದುಕೊಂಡ ಪ್ರಕರಣ ನಡೆದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಿರು ಈ ಉತ್ಸವದಲ್ಲಿ ಜನರ ಕೊರತೆ ಕಂಡುಬಂದು ಮುಜುಗರಕ್ಕೀಡಾಗಿ ಅವರು ಸಿಟ್ಟಾಗಿದ್ದರು.
ಸುಮಾರು ಐದು‌‌ ನಿಮಿಷಗಳ ಕಾಲ ವೇದಿಕೆಯಲ್ಲೇ ಜಿಲ್ಲಾಧಿಕಾರಿಗೆ ಗರಂ ಆಗಿ ಪ್ರಶ್ನೆಗಳನ್ನು ಕೇಳಿದ ಸಚಿವರು, ಬಳಿಕ ಜನ ಕಡಿಮೆ‌ ಇರುವುದಕ್ಕೆ ಮುಖ್ಯಮಂತ್ರಿಯವರಿಗೆ ಸಮಜಾಯಿಷಿಯನ್ನೂ ನೀಡಿದರು. ಸರ್ಕಾರದಿಂದ ಹತ್ತು ಕೋಟಿ ರೂಪಾಯಿ ಖರ್ಚು ಮಾಡಿ ಈ ಉತ್ಸವ ಆಯೋಜಿಸಲಾಗಿದ್ದು, ಹಿಂದೆಲ್ಲ 50ರಿಂದ 60 ಸಾವಿರ ಜನರು ಭಾಗಿಯಾಗುತ್ತಿದ್ದರು. ಆದರೆ ಈ ಸಲ ಈ ಉತ್ಸವದಲ್ಲಿ ಜನರು ನಿರೀಕ್ಷಿತ ಸಂಖ್ಯೆಯಲ್ಲಿ ಬರದೆ ಖಾಲಿ ಕುರ್ಚಿಗಳು ಕಂಡುಬಂದಿವೆ.
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?

ಈತನ ಪತ್ತೆಗೆ ಸುಳಿವು ಕೊಟ್ಟವರಿಗೆ ಒಂದು ಲಕ್ಷ ರೂ. ಬಹುಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 1 =
Remember me
