ಚಿಕ್ಕಬಳ್ಳಾಪುರ: ಪದವೀಧರರು ತಮ್ಮ ಶೈಕ್ಷಣಿಕ ಜ್ಞಾನವನ್ನು ದೇಶದ ಹಿತಾಸಕ್ತಿ ಹಾಗೂ ಸಮಾಜದ ಒಳಿತಿಗಾಗಿ ಬಳಸಬೇಕು ಎಂದು ರಾಜ್ಯಪಾಲ ಥಾವರ್​​ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಶ್ರೀ ಸತ್ಯಸಾಯಿ ಪ್ರೇಮಾಮೃತಂ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಸತ್ಯಸಾಯಿ ಯುನಿವರ್ಸಿಟಿ ಆಫ್ ಹ್ಯೂಮನ್ ಎಕ್ಸಲೆನ್ಸ್​ನ ಎರಡನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಈ ಸಮಾರಂಭದಲ್ಲಿ ಭಾಗಿಯಾದ ರಾಜ್ಯಪಾಲರು, ಘಟಿಕೋತ್ಸವವನ್ನುದ್ದೇಶಿಸಿ ಮಾತನಾಡುತ್ತ, ಎಲ್ಲರಿಗೂ ಗುರು ಪೂರ್ಣಿಮೆಯ ಶುಭಾಶಯಗಳನ್ನು ಕೋರಿದರು. ವಿಶ್ವವಿದ್ಯಾಲಯ ಇಂದು ಆಯೋಜಿಸಿರುವ ಘಟಿಕೋತ್ಸವ ಸಮಾರಂಭ ಗುರು-ಶಿಷ್ಯರ ಶ್ರೇಷ್ಠ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದರು.
ದೇಶದ ಗೌರವಾನ್ವಿತ ರಾಷ್ಟ್ರಪತಿಯವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿರುವುದರಿಂದ ಈ ಸಮಾರಂಭದ ಘನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟಿಕೋತ್ಸವದಲ್ಲಿ ಭಾಗವಹಿಸಿದ್ದಕ್ಕಾಗಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಮತ್ತು ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದರು.
ಇದನ್ನೂ ಓದಿ:ನಮ್ಮೂರಲ್ಲಿ ಸರ್ಕಾರಿ ವೈದ್ಯರೇ ಉಳಿಯಲ್ಲ.. ನೋಡಿ ಎಂಥ ಪರಿಸ್ಥಿತಿ!: ಸಿಎಂ ಸಿದ್ದರಾಮಯ್ಯ
ಇಂದು ಅನೇಕ ವಿದ್ಯಾರ್ಥಿಗಳಿಗೆ ಪದವಿಗಳನ್ನು ನೀಡಲಾಗಿದೆ. ಆ ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರಿಗೆ ಅಭಿನಂದನೆಗಳು. ಇಲ್ಲಿ ಪಡೆದ ಶಿಕ್ಷಣವನ್ನು ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಮಾಜ ಸೇವೆಗಾಗಿ ಬಳಸಬೇಕು ಎಂದು ರಾಜ್ಯಪಾಲರು ಕಿವಿಮಾತು ಹೇಳಿದರು.ನಮ್ಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯ ಬಹಳ ಪುರಾತನವಾದುದು. ಅನಾದಿ ಕಾಲದಿಂದಲೂ ನಾವು “ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯ” ಎಂಬ ಮನೋಭಾವದಿಂದ ಪ್ರೇರಿತರಾಗಿದ್ದೇವೆ, “ವಸುಧೈವ ಕುಟುಂಬಕಂ” ತತ್ವಶಾಸ್ತ್ರ ಮತ್ತು ಧ್ಯಾನ, ಸಾರ್ವತ್ರಿಕ ಸಹೋದರತ್ವ ಮತ್ತು ವಿಶ್ವಶಾಂತಿ ಮತ್ತು ಸಮಾನತೆ-ಸಾಮರಸ್ಯವನ್ನು ಕಲಿಸುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಸಕಾರಾತ್ಮಕ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು.
ಇದನ್ನೂ ಓದಿ:‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ
ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಮುಂದಿನ 25 ವರ್ಷಗಳು ಅಮೃತ ಕಾಲ, ಇದು ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ನಾವು ಪಾಲುದಾರರಾಗಿರಬೇಕು ಎಂದೂ ಹೇಳಿದರು.
ವಿದ್ಯಾರ್ಥಿಗಳು ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರವನ್ನು ನಿರ್ವಹಿಸುವುದನ್ನು ಮುಂದುವರಿಸುತ್ತೀರಿ, ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಇತರರನ್ನು ಪ್ರೇರೇಪಿಸುತ್ತೀರಿ ಹಾಗೂ ಏಕ್ ಭಾರತ್, ಶ್ರೇಷ್ಠ ಭಾರತ್ ಮತ್ತು ಆತ್ಮನಿರ್ಭರ್ ಭಾರತ್ ಮಾಡುವಲ್ಲಿ ಕೆಲಸ ಮಾಡುತ್ತೀರಿ ಎಂಬ ನಂಬಿಕೆ ಇದೆ ಎಂದು ರಾಜ್ಯಪಾಲರು ಆಶಿಸಿದರು.
ಶ್ರೀಸತ್ಯಸಾಯಿ ಮಾನವ ಶ್ರೇಷ್ಠತೆಯ ವಿಶ್ವವಿದ್ಯಾನಿಲಯವು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕಾಂಶ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಆಧುನಿಕ ಶಿಕ್ಷಣ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ಸಂಯೋಜಿಸುತ್ತಿರುವುದು ಪ್ರಶಂಸನೀಯ ಎಂದರು.
ಇದನ್ನೂ ಓದಿ:ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ
ಈ ಕ್ಯಾಂಪಸ್, ವಿಶ್ವವಿದ್ಯಾನಿಲಯದ ಚಟುವಟಿಕೆಗಳನ್ನು ಹತ್ತಿರದಿಂದ ನೋಡುವ ಮತ್ತು ಅರ್ಥಮಾಡಿಕೊಳ್ಳುವ ಅವಕಾಶ ದೊರೆತಿದೆ. ಕರ್ನಾಟಕದ ಸುಂದರವಾದ ಪರಿಸರದಲ್ಲಿ ಸಾಂಸ್ಕೃತಿಕ ಸೌಂದರ್ಯದೊಂದಿಗಿನ ಶಿಕ್ಷಣದ ಈ ಹೊಸ ಸ್ಥಳ ಎಲ್ಲರಿಗೂ ಸ್ಫೂರ್ತಿಯಾಗಿದೆ ಎಂದರು.
ಉಚಿತ ಶಿಕ್ಷಣ, ಉಚಿತ ಪೋಷಣೆ ಮತ್ತು ಉಚಿತ ವೈದ್ಯಕೀಯ ಸೇವೆಯಂಥ ಮಾನವ ಸೇವೆಯ ಅನೇಕ ವಿಶಿಷ್ಟ ಪ್ರಯೋಗಗಳು ಈ ಕ್ಯಾಂಪಸ್‌ನಲ್ಲಿ ನಡೆಯುತ್ತಿವೆ. ಈ ವಿಶ್ವವಿದ್ಯಾಲಯವು ಶ್ರೀಸತ್ಯಸಾಯಿ ಬಾಬಾರವರ ಸ್ಫೂರ್ತಿದಾಯಕ ಸಂದೇಶಗಳು ಮತ್ತು ಚಿಂತನೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯವು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹಾನ್ ವ್ಯಕ್ತಿಗಳಿಗೆ ಗೌರವ ಪದವಿ ನೀಡಿದೆ. ಈ ಮಹಾನ್ ವ್ಯಕ್ತಿಗಳನ್ನು ಅವರ ಅತ್ಯುತ್ತಮ ಸಾಧನೆಗಳಿಗಾಗಿ ಮತ್ತು ಮಾನವ ಸಮಾಜದ ಪ್ರಗತಿಗೆ ಮಹತ್ವದ ಕೊಡುಗೆಗಾಗಿ ಅಭಿನಂದಿಸುತ್ತೇನೆ. ಸಾಧಕರು ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕು ಎಂದೂ ರಾಜ್ಯಪಾಲರು ಆಶಿಸಿದರು.
ವಿಶ್ವವಿದ್ಯಾನಿಲಯದ ಸಂಸ್ಥಾಪಕ ಸದ್ಗುರು ಸ್ವಾಮಿ ಮಧುಸೂದನ ಸಾಯಿ, ಕುಲಪತಿ ಬಿ.ಎನ್. ನರಸಿಂಹಮೂರ್ತಿ, ಉಪಕುಲಪತಿ ಪ್ರೊ.ಶ್ರೀಕಾಂತ್​ಮೂರ್ತಿ, ಶ್ರೀಸತ್ಯಸಾಯಿ ಆರೋಗ್ಯ ಮತ್ತು ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಡಾ.ಶ್ರೀನಿವಾಸ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ಮುಖಂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
