‘ಹಸಿವಿನ ಸಂಕಟ ಏನು ಎಂಬುದು ಅದನ್ನು ಅನುಭವಿಸಿದವರಿಗೆ ಮಾತ್ರ ಗೊತ್ತಿರುತ್ತದೆ. ನಮ್ಮ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಮಲಗಬಾರದು. ಅದಕ್ಕಾಗಿಯೇ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಸಿವುಮುಕ್ತ ಕರ್ನಾಟಕವೇ ನಮ್ಮ ಗುರಿ…’ ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಾಗ ಹೇಳುವ ಮಾತು. ಇದೇ ಸದಾಶಯದೊಂದಿಗೆ ಅವರು 2013ರಲ್ಲಿ, ತಮ್ಮ ಮುಖ್ಯಮಂತ್ರಿತ್ವದ ಮೊದಲ ಅವಧಿಯಲ್ಲಿ, ‘ಅನ್ನಭಾಗ್ಯ’ ಎಂಬ ಯೋಜನೆಯನ್ನು ಜಾರಿಗೆ ತಂದರು. ಬಡಕುಟುಂಬಗಳಿಗೆ ಪ್ರತಿ ತಿಂಗಳು ಐದು ಕೆಜಿ ಆಹಾರಧಾನ್ಯವನ್ನು ಉಚಿತವಾಗಿ ಹಂಚುವ ಕಾರ್ಯಕ್ರಮ ಅದು. ಅದನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ-ಸಾಮಾಜಿಕ ಸಂಸ್ಥೆಗಳು, ಸರ್ಕಾರಗಳು ಹೊಗಳಿದ್ದೂ ಉಂಟು. ನಂತರ ಹತ್ತು ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಈ ಕಾರ್ಯಕ್ರಮದಡಿ ಹಂಚುತ್ತಿದ್ದ ಅಕ್ಕಿಯ ಪ್ರಮಾಣವನ್ನು 10 ಕೆಜಿಗೆ ಏರಿಸಿದರು. ಕೇಂದ್ರದಿಂದ ಅಕ್ಕಿ ಸಿಗದಿದ್ದಾಗ, 5 ಕೆಜಿ ಅಕ್ಕಿ ವಿತರಣೆ ಜತೆಗೆ, ಉಳಿದ ಪ್ರಮಾಣದ ಅಕ್ಕಿಗೆ ಬದಲಾಗಿ ಹಣ ನೀಡುವ ವಾಗ್ದಾನ ಮಾಡಿದರು. ಸಿದ್ದರಾಮಯ್ಯ ಅವರ ಸಾಮಾಜಿಕ ಕಳಕಳಿ, ಬಡವರ ಬಗೆಗಿನ ಕಾಳಜಿ ಬಗ್ಗೆ ಯಾರಿಗೂ ಸಂಶಯವಿಲ್ಲ. ಆದರೆ ಈ ಯೋಜನೆ ಕಾರ್ಯಗತವಾಗುತ್ತಿರುವ ರೀತಿಯ ಬಗ್ಗೆ ಆಕ್ಷೇಪ ಇದೆ.
ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊಡ್ಡ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಆಗುತ್ತಿರುವ ಸಂಗತಿ ಈಗ ಗುಟ್ಟಾಗಿ ಉಳಿದಿಲ್ಲ. ಈ ಕುರಿತು ರಾಜ್ಯದಾದ್ಯಂತ ಸಾವಿರಾರು ಪ್ರಕರಣಗಳು ದಾಖಲಾಗಿವೆ. 2020-21ರಲ್ಲಿ 65, 2021-22ರಲ್ಲಿ 472, 2022-23ರಲ್ಲಿ ನವೆಂಬರ್​ವರೆಗೆ 300 ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆಯ ಪ್ರಕರಣಗಳು ಹೆಚ್ಚುತ್ತಲೇ ಸಾಗಿವೆ. ಇದೀಗ ಈ ವಿಷಯ ಹೈಕೋರ್ಟ್​ನ ಕೆಂಗಣ್ಣಿಗೂ ಗುರಿಯಾಗಿದೆ. ‘ಯೋಜನೆಯ ಅಕ್ಕಿಯನ್ನು ಕಳ್ಳಸಾಗಣೆದಾರರು ಸರಕುಪಟ್ಟಿ, ಸಿ ಫಾಮ್ರ್ ಮತ್ತು ರಸೀದಿ ಇಲ್ಲದೆ ಟ್ರಕ್​ಗಳಲ್ಲಿ ಸಾಗಿಸಿ, ಹೋಟೆಲ್​ಗಳಿಗೆ ಮಾರಾಟ ಮಾಡುತ್ತಾರೆ. ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ಕಳ್ಳಸಾಗಣೆ ಮಾಡುವ ಗೂಂಡಾಗಳ ಬೆನ್ನಿಗೆ ರಾಜಕಾರಣಿಗಳು ನಿಲ್ಲುತ್ತಾರೆ. ಇದು ತಪ್ಪಬೇಕು. ಇಂತಹವರನ್ನು ಪತ್ತೆ ಹಚ್ಚಿದಾಗ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇದ್ದು, ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರು ಮೌಖಿಕ ಆದೇಶ ನೀಡಿದ್ದಾರೆ. ಈ ಆದೇಶದ ನಂತರವಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುತ್ತಾರೆ ಎಂದು ಆಶಿಸೋಣ. ಎಚ್ಚೆತ್ತುಕೊಳ್ಳದಿದ್ದರೆ ಈ ವಿಷಯದಲ್ಲಿ ಹೈಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗುವುದರಲ್ಲಿ ಯಾವ ಸಂಶಯವೂ ಇಲ್ಲ. ಅದಕ್ಕೆ ಮೊದಲೇ, ಈ ಮಹತ್ವಾಕಾಂಕ್ಷಿ ಕಾರ್ಯಕ್ರಮ ಹಾದಿ ತಪ್ಪದಂತೆ ನೋಡಿಕೊಳ್ಳುವ ಹೊಣೆಗಾರಿಕೆ ರಾಜ್ಯ ಸರ್ಕಾರಕ್ಕೆ, ಅದರಲ್ಲೂ ವಿಶೇಷವಾಗಿ ಇದರ ರೂವಾರಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆ. ಈ ಕುರಿತು ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳ ವಿಶೇಷ ಸಭೆ ಕರೆದು, ಬಡವರ ಅಕ್ಕಿ ಬೇರೆಡೆಗೆ ಹೋಗದಂತೆ ಎಚ್ಚರ ವಹಿಸಲು ಕಟ್ಟಪ್ಪಣೆ ಮಾಡಬೇಕು. ತಪ್ಪಿದವರನ್ನು ಸರ್ಕಾರಿ ಸೇವೆಯಿಂದಲೇ ವಜಾ ಮಾಡುವಂತಹ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಆಗ ಮಾತ್ರ ಇಂತಹ ದುಸ್ಸಾಹಸಕ್ಕೆ ಕೈಹಾಕುವ ಬಗ್ಗೆ ಅಧಿಕಾರಿಗಳು, ಮಧ್ಯವರ್ತಿಗಳು, ವ್ಯಾಪಾರಸ್ಥರು ಯೋಚಿಸುವಂತಾಗುತ್ತದೆ.
ಡೆಂಘೀ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಿ: ಡಿಸಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 3 =
Remember me
