ವೈದ್ಯಕೀಯ, ದಂತವೈದ್ಯಕೀಯ ಮತ್ತು ಇತರ ಕೆಲವು ಕೋರ್ಸ್​ಗಳ ಪ್ರವೇಶಕ್ಕೆ ಅರ್ಹತೆಯನ್ನು ನಿರ್ಣಯಿಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿ) ಅಥವಾ ನೀಟ್ ಪರೀಕ್ಷೆ ಈ ಬಾರಿ ಗೊಂದಲದ ಗೂಡಾಗಿದ್ದು, ಹಲವು ತಪು್ಪಗಳು ನಡೆದಿವೆ. ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಅವರ ಪಾಲಕರೊಂದಿಗೆ ಚರ್ಚೆ ನಡೆಸಿ, ಸಮಸ್ಯೆಗಳನ್ನು ಆಲಿಸಿದ್ದಾರೆ. ಆದರೆ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (ಎನ್​ಟಿಎ) ಮಾಡಿದ ಎಡವಟ್ಟುಗಳಿಗೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೆಲ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದ್ದು ವಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ‘ವಿದ್ಯಾರ್ಥಿಗಳ ದನಿಯಾಗಿ ಬೀದಿಯಿಂದ ಸಂಸತ್ತಿನವರೆಗೆ ಹೋರಾಟ ನಡೆಸಲಾಗುವುದು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ನಡುವೆ, ನೀಟ್ ವಿವಾದ ಸಂಬಂಧ ಮಂಗಳವಾರ ಎನ್​ಟಿಎಗೆ ಖಡಕ್ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, ಪರೀಕ್ಷೆ ನಡೆಸುವಲ್ಲಿ ‘ಶೇಕಡ 0.001’ರಷ್ಟು ನಿರ್ಲಕ್ಷ್ಯ ತೋರಿದ್ದರೂ ಅದನ್ನು ಕಠಿಣವಾಗಿ ನಿರ್ವಹಿಸಬೇಕೆಂದು ಸೂಚಿಸಿದೆ. ‘ಯಾರಾದರೂ ಮೋಸ ಮಾಡಿ ವೈದ್ಯರಾಗುತ್ತಾರೆ ಎನ್ನುವುದನ್ನು ಕಲ್ಪಿಸಿಕೊಳ್ಳಿ. ಅಂಥವರು ನಿಜವಾಗಿಯೂ ಸಮಾಜಕ್ಕೆ ತುಂಬ ಅಪಾಯಕಾರಿ ಆಗಿರುತ್ತಾರೆ’ ಎಂದಿರುವ ನ್ಯಾಯಾಲಯ, ದೋಷ ಸರಿಪಡಿಸಲು ದಕ್ಷತೆಯಿಂದ ಕೆಲಸ ಮಾಡುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ ಹೇಳಿರುವುದು ಸರಿಯಾಗಿಯೇ ಇದೆ. ಭವಿಷ್ಯದ ಕನಸುಗಳನ್ನು ಇರಿಸಿಕೊಂಡು, ಸಾಕಷ್ಟು ಶ್ರಮ ಹಾಕಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ. ಆದರೆ, ಪರೀಕ್ಷೆ ನಡೆಸುವವರ ತಪು್ಪ, ನಿರ್ಲಕ್ಷ್ಯ ಅಥವಾ ಲೋಪಗಳಿಂದ ವಿದ್ಯಾರ್ಥಿಗಳು ಏಕೆ ಶಿಕ್ಷೆ ಅನುಭವಿಸಬೇಕು? ಇಂಥ ಪ್ರಕರಣದಲ್ಲಿ ತಪು್ಪ ಮಾಡಿದ ಯಾರನ್ನೂ ರಕ್ಷಿಸುವ ಪ್ರಯತ್ನ ನಡೆಯಬಾರದು. ತಪ್ಪಾಗಿ ಮುದ್ರಣಗೊಂಡ ಪ್ರಶ್ನೆ, ಹರಿದು ಹೋದ ಒಎಂಆರ್ ಶೀಟ್​ಗಳು ಅಥವಾ ಒಎಂಆರ್ ಶೀಟ್​ಗಳ ವಿತರಣೆ ವಿಳಂಬ ಮುಂತಾದ ಕಾರಣಗಳಿಂದಾಗಿ ಎನ್​ಟಿಎ ಕೆಲವು ಅಭ್ಯರ್ಥಿಗಳಿಗೆ ಕೃಪಾಂಕ ನೀಡಿದ್ದರಿಂದ ವಿವಾದ ಭುಗಿಲೆದ್ದಿತ್ತು. ವ್ಯಾಪಕ ಪ್ರತಿರೋಧದ ಹಿನ್ನೆಲೆಯಲ್ಲಿ 1,563 ಅಭ್ಯರ್ಥಿಗಳಿಗೆ ನೀಡಲಾದ ಕೃಪಾಂಕವನ್ನು ರದ್ದುಪಡಿಸಲಾಗಿದೆ. ಆದರೂ, ಇನ್ನಷ್ಟು ಲೋಪಗಳು ಪತ್ತೆಯಾಗುತ್ತಲೇ ಇದ್ದು, ದೇಶದ ಬೇರೆ-ಬೇರೆ ನಗರಗಳಲ್ಲಿ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರಿಯಾದ ಯೋಜನೆ ಇದ್ದಲ್ಲಿ, ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಲ್ಲಿ ಲೋಪಗಳಿಗೆ ಆಸ್ಪದ ಇಲ್ಲದಂತೆ ಪರೀಕ್ಷೆ ನಡೆಸಲು ಸಾಧ್ಯವಿದೆ. ಇಡೀ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಕೂಲಂಕಷ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಇಂಥ ತಪು್ಪಗಳು ಮರುಕಳಿಸದಂತೆ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆಯ ಜಾಲ ರಾಷ್ಟ್ರಾದ್ಯಂತ ವ್ಯಾಪಿಸಿದ್ದು, ಎಲ್ಲ ಪ್ರಮುಖ ಪರೀಕ್ಷೆಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದರ ವಿರುದ್ಧ ಪ್ರಬಲ ಕಾನೂನಾಸ್ತ್ರ ತರಲು ಇದು ಸಕಾಲ.
ಭಾರತದ 41ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
