ಬೆಂಗಳೂರು:ಲೋಕಸಭಾ ಚುನಾವಣೆಗೆ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ, ಪ್ರತ್ಯೇಕ ಸಭೆ ನಡೆಸುವುದರೊಂದಿಗೆ ತೀವ್ರ ಅಸಮಾಧಾನ ಹೊರಹಾಕಿದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್​ ರಾಜ್ಯಾಧ್ಯಕ್ಷ ಸ್ಥಾನದಿಂದ ಇಂದು ಉಚ್ಛಾಟನೆ ಮಾಡಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ. ಜೆಡಿಎಸ್​ ನಾಯಕರಾದ ಎಚ್​.ಡಿ. ಕುಮಾರಸ್ವಾಮಿ ಅವರನ್ನು ರಾಜ್ಯದ ಜನತಾದಳ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ:ಅಂಗವಿಕಲೆಯನ್ನು ಮೆಟ್ಟಿಲು ಮೂಲಕ ಕರಿಸಿಕೊಂಡ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿ: ಮದುವೆಯಾಗಲು ಬಂದಿದ್ದ ಮಹಿಳೆ ಆರೋಪ
ಈ ಬಗ್ಗೆ ಟ್ವೀಟ್​ ಮಾಡಿದ ಎಚ್​ಡಿಕೆ, “ರಾಜ್ಯದ ಜನತಾದಳ ಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಕ ಮಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್​.ಡಿ. ದೇವೇಗೌಡ ಅವರಿಗೆ ನನ್ನ ಕೃತಜ್ಞತೆಗಳು. ಈ ಒಮ್ಮತದ ನಿರ್ಧಾರಕ್ಕೆ ಕಾರಣರಾದ ಪಕ್ಷದ ಎಲ್ಲಾ ಮುಖಂಡರು, ಕೋರ್ ಕಮಿಟಿಯ ಎಲ್ಲಾ ಪ್ರಮುಖರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿ ಪ್ರತಿಯೊಬ್ಬರಿಗೂ ನನ್ನ ಧನ್ಯವಾದಗಳು” ಎಂದರು.
ರಾಜ್ಯದ@JanataDal_Sಘಟಕದ ಹಂಗಾಮಿ ಅಧ್ಯಕ್ಷರನ್ನಾಗಿ ನನ್ನನ್ನು ನೇಮಕ ಮಾಡಿದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ@H_D_Devegowdaಅವರಿಗೆ ನನ್ನ ಕೃತಜ್ಞತೆಗಳು. ಈ ಒಮ್ಮತದ ನಿರ್ಧಾರಕ್ಕೆ ಕಾರಣರಾದ ಪಕ್ಷದ ಎಲ್ಲಾ ಮುಖಂಡರು, ಕೋರ್ ಕಮಿಟಿಯ ಎಲ್ಲಾ ಪ್ರಮುಖರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಘಟಕಗಳ ಅಧ್ಯಕ್ಷರು…pic.twitter.com/TjcFfGx0YH
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)October 19, 2023

“ಪಕ್ಷಕ್ಕೆ ನವಚೈತನ್ಯ ತುಂಬುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ವಿಜಯದಶಮಿ ನಂತರ ಸಂಘಟನೆಯನ್ನು ಆರಂಭಿಸೋಣ. ಎಲ್ಲರ ಸಹಕಾರ ಇರಲಿ ಎಂದು ಕೋರುತ್ತೇನೆ” ಎಂದು ಟ್ವೀಟ್​ ಮಾಡಿ ತಿಳಿಸಿದರು.
ತಮ್ಮ ಮುಂದಿನ ಸಿನಿಮಾದ ಬಗ್ಗೆ ನಟ ವಿಶಾಲ್​ ಕೊಟ್ಟ ಸುಳಿವು ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − six =
Remember me
