ಬೆಂಗಳೂರು:ಜೈಲು ಶಿಕ್ಷೆ ಅನುಭವಿಸುತ್ತಿರುವಾಗ ಬಂದು ವಿಚಾರಿಸಿಲ್ಲ ಎಂಬ ಕೋಪಕ್ಕೆ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಪರ ನಗರ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.
ಅಗ್ರಹಾರ ದಾಸರಹಳ್ಳಿ ನಿವಾಸಿ ಬಲ್ವಿಂದರ್ ಸಿಂಗ್ ಅಲಿಯಾಸ್ ಬಲ್ಲು ಶಿಕ್ಷೆಗೆ ಗುರಿಯಾದವ. ಈತ ತನ್ನ ಪತ್ನಿ ಶಾಲಿನಿ ದೇವಿ ಎಂಬಾಕೆಯನ್ನು ಹತ್ಯೆ ಮಾಡಿದ್ದ. ಕೊಲೆ ಪ್ರಕರಣ ಸಂಬಂಧ ಸರ್ಕಾರ ಅಭಿಯೋಜಕಿ ಎಚ್.ಆರ್.ಸತ್ಯವತಿ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ವಾದ-ಪ್ರತಿವಾದ ಆಲಿಸಿದ ನ್ಯಾ. ಕೆ.ಎಸ್.ಜ್ಯೋತಿಶ್ರೀ, ಆರೋಪಿ ಬಲ್ವಿಂದರ್ ಸಿಂಗ್‌ನನ್ನು ಅಪರಾಧಿ ಎಂದು ಘೋಷಣೆ ಮಾಡಿ ಜೀವಾವಧಿ ಶಿಕ್ಷೆ, 1 ಸಾವಿರ ರೂ. ದಂಡ ವಿಧಿಸಿದ್ದಾರೆ. ಮೃತಳ ಇಬ್ಬರು ಹೆಣ್ಣು ಮಕ್ಕಳಿಗೆ ತಲಾ 1.5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ:ಮಕ್ಕಳ ಕಣ್ಣಿಗೆ ಕಾಡಿಗೆ ಎಷ್ಟು ಸುರಕ್ಷಿತ!; ಅಪಾಯವೇನು?
ಬಲ್ವಿಂದರ್ ಸಿಂಗ್ ಮತ್ತು ಶಾಲಿನಿದೇವಿ ದಂಪತಿ ತನ್ನ ಇಬ್ಬರು ಹೆಣ್ಣು ಮಕ್ಕಳ ಜತೆಗೆ ನೆಲೆಸಿದ್ದರು. ಪತಿ ಮದ್ಯ ವ್ಯಸನಿಯಾಗಿದ್ದು, ಕೆಲಸಕ್ಕೆ ಹೋಗುತ್ತಿರಲಿಲ್ಲ. ಶಾಲಿನಿದೇವಿ ಎಲೆಕ್ಟ್ರಿಕ್ ಅಂಗಡಿಗೆ ಕೆಲಸಕ್ಕೆ ಹೋಗಿ ಸಂಸಾರ ಸಾಗಿಸುತ್ತಿದ್ದಳು. ಆದರೂ ಕುಡಿಯಲು ಹಣ ಕೊಡಲಿಲ್ಲವೆಂದು ಗಂಡ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಇದೇ ವಿಚಾರಕ್ಕೆ ಪತ್ನಿ, ಪೊಲೀಸರಿಗೆ ದೂರು ಕೊಟ್ಟಿದ್ದಳು. ಈ ಕೇಸಿನಲ್ಲಿ 6 ತಿಂಗಳು ಜೈಲು ಪಾಲಾಗಿದ್ದ. ಕಾರಾಗೃಹದಲ್ಲಿ ಇದ್ದಾಗ ಪತ್ನಿ ಬಂದು ವಿಚಾರಿಸಲಿಲ್ಲ ಎಂದು ಬಿಲ್ವಂದರ್ ಸಿಂಗ್​ಗೆ ಕೋಪ ಇತ್ತು.
ಇದನ್ನೂ ಓದಿ:ಆ ‘ಜ್ಯೋತಿ’ ಇದೆ ಎಂದು ಗೃಹಜ್ಯೋತಿ ನೋಂದಣಿ ಕಡೆಗಣಿಸಬೇಡಿ!; ಇಲ್ಲಿದೆ ವಿವರ ಗಮನಿಸಿ..
ಜೈಲಿನಿಂದ ಹೊರಬಂದ ಮೇಲೆ ಮನೆಯಲ್ಲಿ ಗಲಾಟೆ ಶುರು ಮಾಡಿದ್ದ. 2017ರ ಸೆಪ್ಟೆಂಬರ್ 9ರಂದು ಕೊಲೆ ಮಾಡುವ ಉದ್ದೇಶದಿಂದ ಪತ್ನಿಯನ್ನು ಖಾಸಗಿ ಕ್ಷಣಗಳನ್ನು ಕಳೆಯಲು ಪ್ರಚೋದನೆ ನೀಡಿದ್ದ. ಬೆತ್ತಲಾದ ಮೇಲೆ ಮಾರಕಾಸ್ತ್ರದಿಂದ ಪತ್ನಿಯ ಕತ್ತು ಕೊಯ್ದು ಪರಾರಿಯಾಗಿದ್ದ. ಮನೆ ಮಾಲೀಕರು ಕಂಡು ಪೊಲೀಸರಿಗೆ ದೂರು ನೀಡಿದ್ದರು. ಮಾಗಡಿ ರಸ್ತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು.
ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!

ಹತ್ತು ದಿನಗಳ ಹಿಂದೆ ಪುತ್ರನೊಂದಿಗೆ ರೀಲ್ಸ್​ನಲ್ಲಿ ರಂಜಿಸಿದ್ದ ಸಿ.ವಿ. ಶಿವಶಂಕರ್; ವಿಡಿಯೋ ವೈರಲ್, ಆ ಖುಷಿ ಇನ್ನು ಬರೀ ನೆನಪು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
