ದಾವಣಗೆರೆ:ಪತಿಯನ್ನು ಕೊಲೆ ಮಾಡಿದ್ದ ಪತ್ನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, 15 ಸಾವಿರ ರೂಪಾಯಿ ದಂಡವನ್ನೂ ತೆರುವಂತೆ ಆದೇಶಿಸಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮ ನಿವಾಸಿ ರೇಣುಕಾ (29) ಎಂಬಾಕೆ ತನ್ನ ಪತಿ ಬಂಗಿ ನರಸಿಂಹಪ್ಪನನ್ನು ಕೊಲೆ ಮಾಡಿದ್ದು, ಪ್ರಕರಣ ಸಂಬಂಧ ಇಂದು ತೀರ್ಪು ನೀಡಿದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನಿತ್ತಿದೆ. ನ್ಯಾಯಾಧೀಶೆ ಕೆ.ಬಿ. ಗೀತಾ ಈ ಆದೇಶವನ್ನು ಹೊರಡಿಸಿದ್ದಾರೆ.
ಪತಿ ನರಸಿಂಹಪ್ಪ ಮದ್ಯವ್ಯಸನಿಯಾಗಿದ್ದು, ಆಗಾಗ ಕುಡಿದು ಬರುತ್ತಿದ್ದುದಲ್ಲದೇ ಪತ್ನಿಯನ್ನು ಪೀಡಿಸುತ್ತಿದ್ದ. ಪತಿಯ ದೌರ್ಜನ್ಯದಿಂದ ಬೇಸತ್ತಿದ್ದ ರೇಣುಕಾ, 2018ರ ಏಪ್ರಿಲ್‌ 8ರಂದು ಕುಡುಗೋಲಿನಿಂದ ಪತಿಯ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಳು. ಬಳಿಕ ಯಾರಿಗೂ ತಿಳಿಯಬಾರದು ಎಂದು ಶವವನ್ನು ಶೌಚದ ಗುಂಡಿಯಲ್ಲಿ ಹಾಕಿ ಮುಚ್ಚಿದ್ದಳು. ಈ ಸಂಬಂಧ ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು. ಸರ್ಕಾರಿ ಅಭಿಯೋಜಕ ಎಸ್‌.ವಿ. ಪಾಟೀಲ್‌ ವಾದ ಮಂಡಿಸಿದ್ದು, ವಿಚಾರಣೆ ನಡೆದು ಇದೀಗ ಅಪರಾಧ ಸಾಬೀತಾಗಿದೆ.
ಪರಸ್ತ್ರೀಗೆ ಕಿಸ್​ ಕೊಟ್ಟಿದ್ದಕ್ಕೆ ಪತಿಗೆ ಪಂಚ್​ ಕೊಟ್ಟ ಪತ್ನಿ: ರಿತೀಶ್ ಕಿಸ್​, ಜೆನಿಲಿಯಾ ಜಲಸ್; ನನಗಿಂತ ಪ್ರೀತಿ ಝಿಂಟಾ ಹೆಚ್ಚಾದ್ಲಾ.. ಡಿಶೂಂ ಡಿಶೂಂ!

ಅರಸೀಕೆರೆ ಹೆಂಗಸರು ನನ್ನ ಮುಖ ಕಂಡ ಕೂಡಲೇ ಬೈತಾರೆ: ಶಾಸಕ ಶಿವಲಿಂಗೇಗೌಡ ಅಳಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + two =
Remember me
