ಬೆಂಗಳೂರು:ಕಾಂಗ್ರೆಸ್​ನ ದುರಹಂಕಾರ ಮತ್ತು ದ್ವೇಷದ ಆಡಳಿತದ ಆಯಸ್ಸು ಲೋಕಸಭಾ ಚುನಾವಣೆವರೆಗೆ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಇಬ್ಬರು ನಾಯಕರ ನಡುವೆ ಭಿನ್ನಾಭಿಪ್ರಾಯ ಇದೆ. ಮೊದಲ ಹಂತದ ಮಂತ್ರಿಮಂಡಲಕ್ಕೆ ರಾತ್ರಿ ಮೂರರವರೆಗೂ ಹಗ್ಗಜಗ್ಗಾಟ ಮಾಡಿದರು. ಈಗ ಎರಡನೇ ಹಂತದ ಪೈಪೋಟಿ ನಡೆದಿದೆ. ಇದನ್ನೆಲ್ಲ ನೋಡಿದರೆ, ಇದು ಸಮ್ಮಿಶ್ರ ಸರ್ಕಾರ ಇದ್ದಂತಿದೆ.‌ ಕಳೆದ ಬಾರಿ ಎರಡು ಪಕ್ಷಗಳಿಂದ ಸಮ್ಮಿಶ್ರ ಸರ್ಕಾರ ಇತ್ತು. ಆ ಸರ್ಕಾರದ ಅಧಿಕಾರ ಕಳೆದ ಲೋಕಸಭೆವರೆಗೂ ಇತ್ತು. ಹಾಗೇ ಈಗ ಒಂದೇ ಪಕ್ಷ ಇದ್ದರೂ, ಎರಡು ಪಕ್ಷಗಳ ರೀತಿ ಸಮ್ಮಿಶ್ರ ಸರ್ಕಾರ ಇದೆ. ಇದರ ಆಯಸ್ಸು ಕೂಡ ಬರುವ ಲೋಕಸಭೆ ಚುನಾವಣೆವರೆಗೆ ಇರುತ್ತದೆ ಎಂದರು.
ಇದನ್ನೂ ಓದಿ:9 ವರ್ಷ, 9 ಪ್ರಶ್ನೆ: ಮೌನ ಮುರಿದು ಉತ್ತರಿಸಿ ಎಂದು ಮೋದಿಗೆ ಕಾಂಗ್ರೆಸ್ ಸವಾಲು
ರಾಜ್ಯದ ನೂತನ ಸರ್ಕಾರದ 8 ಸಚಿವರು ಮಾತನಾಡುವುದನ್ನು ನೋಡಿದರೆ, ದ್ವೇಷದ, ಸೇಡಿನ ರಾಜಕಾರಣ ಮಾಡಲು ಪ್ರಾರಂಭ ಮಾಡಿದ್ದಾರೆ. ಅಭಿವೃದ್ಧಿಗಿಂತ ಸೇಡು, ದ್ವೇಷದ ರಾಜಕಾರಣವೇ ಇವರಿಗೆ ಹೆಚ್ಚಾಗಿದೆ. ಜನರ ಸಮಸ್ಯೆಗಳ ಬಗೆಹರಿಸಲು ತುರ್ತಾದ ನಿರ್ಣಯ ಎಲ್ಲೂ ಕಾಣುತ್ತಿಲ್ಲ. ರಾಜ್ಯದಲ್ಲಿ ಇವತ್ತು ಕುಡಿಯುವ ನೀರಿನ ಸಮಸ್ಯೆ ದೊಡ್ಡದಾಗಿದೆ. ಆದರೆ, ಆ ಸಮಸ್ಯೆ ಬಗೆಹರಿಸುವ ಬಗ್ಗೆ ಗಮನ ಕೊಟ್ಟಿಲ್ಲ. ಹಣ ಕೂಡ ಬಿಡುಗಡೆ ಮಾಡಿಲ್ಲ ಎಂದರು.
ರಾಷ್ಟ್ರದಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದೆ. ರಾಜಕೀಯ ಟೀಕೆ ಮಾಡಿದ ಅಶ್ವಥ್ ನಾರಾಯಣ್, ಹರಿಶ್ ಪೂಂಜಾ ಮೇಲೆ ಕೇಸ್ ಹಾಕಿದ್ದಾರೆ. ಇದು ದುರಹಂಕಾರದ, ದ್ವೇಷದ, ದಮನಕಾರಿ ಆಡಳಿತ. ಸರ್ಕಾರ ಕೆಲವೇ ದಿನಗಳಲ್ಲಿ ಜನರ ಆಕ್ರೋಶಕ್ಕೆ ಒಳಗಾಗುತ್ತದೆ ಎಂದರು.
RSS, ಬಜರಂಗದಳ ಬ್ಯಾನ್ ಅಧಿಕಾರ ಇಲ್ಲ
RSS, ಬಜರಂಗದಳ ಬ್ಯಾನ್ ಬಗ್ಗೆ ಹೇಳುತ್ತಾರೆ. ಅವರಿಗೆ ಸವಾಲು ಹಾಕುತ್ತೇನೆ- ಬ್ಯಾನ್ ಮಾಡಿ ತೋರಿಸಲಿ. ಯಾವುದೇ ಸಂಘ ಸಂಸ್ಥೆಯನ್ನು ಬ್ಯಾನ್ ಮಾಡುವ ಅಧಿಕಾರ ಇವರಿಗಿಲ್ಲ. ಅದನ್ನು ಮಾಡುವುದು ಕೇಂದ್ರ ಸರ್ಕಾರ ಎಂದರು.
ಗ್ಯಾರಂಟಿಗಳಿಗೆ ಕಂಡಿಷನ್ ಸರಿಯಲ್ಲ
ಚುನಾವಣೆಗೆ ಮುನ್ನ ನೀಡಿದ ಗ್ಯಾರಂಟಿಗಳ ಭರವಸೆ ಈಡೇರಿಸಲು ಎರಡನೇ ಕ್ಯಾಬಿನೆಟ್​​ವರೆಗೂ ಯಾಕೆ ಕಾಯಬೇಕು? ಇದು ಜನರನ್ನು ಯಾಮಾರಿಸುವ ಕೆಲಸ‌. ತಮಿಳುನಾಡಿನಿಂದ ಬಂದವರನ್ನು ಹೇಗೆ ಗುರುತಿಸುತ್ತಾರೆ? ಒಲ್ಲದ ಗಂಡನಿಗೆ ನೂರಾರು ಕುಂಟು ನೆಪ ಎನ್ನುವ ಹಾಗೇ ಕಾಂಗ್ರೆಸ್ ಕಥೆಯಾಗಿದೆ ಎಂದರು.
ವಿರೋಧ ಪಕ್ಷದ ನಾಯಕ ವಿಚಾರ
ಬಿಜೆಪಿಯಲ್ಲಿ ಮೊದಲು ವಿರೋಧ ಪಕ್ಷದ ನಾಯಕ ಆಯ್ಕೆಯಾಗಲಿ ಎಂಬ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬೊಮ್ಮಾಯಿ, “ನಮ್ಮ ಬಗ್ಗೆ ಅವರಿಗೆ ಯಾಕೆ ಇಷ್ಟು ಚಿಂತೆ? ಅವರನ್ನು ಜನರು ಗೆಲ್ಲಿಸಿದ್ದಾರೆ. ಮೊದಲು ಅವರು ಜನ ಕೇಳುತ್ತಿರುವ ಬೇಡಿಕೆ ಈಡೇರಿಸಲಿ. ವಿರೋಧ ಪಕ್ಷದ ನಾಯಕರ ನೇಮಕ ಯಾವಾಗ ಮಾಡಬೇಕು ಎಂಬುದು ನಮಗೆ ಗೊತ್ತಿದೆ. ಬರುವ ಅಸೆಂಬ್ಲಿ ಅಧಿವೇಶನದ ಒಳಗೆ ವಿರೋಧ ಪಕ್ಷದ ನಾಯಕರ ಆಯ್ಕೆ ಆಗುತ್ತದೆ. ಹೀಗಾಗಿ ನಮ್ಮ ಬಗ್ಗೆ ಬಿಡಿ, ನೀವು ನಿಮ್ಮ ಕೆಲಸ ಮಾಡಿ” ಎಂದು ಕಾಂಗ್ರೆಸ್​​ಗೆ ತಿರುಗೇಟು ನೀಡಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
